ಜಯನಗರ: ಶ್ರೀ ಗುರುರಾಯರ ಸನ್ನಿಧಿಯಲ್ಲಿ "ಪೌರ್ಣಿಮೆ" ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಪೂಜೆ

Chandrashekhara Kulamarva
0

ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಅಧಿಕ ಮಾಸ ಪೌರ್ಣಿಮೆ ಪ್ರಯುಕ್ತ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ  ಆರ್.ಕೆ. ವಾದಿಂದ್ರ ಆಚಾರ್ಯರ ನೇತೃತ್ವದಲ್ಲಿ ಪುರೋಹಿತರಾದ ನಂದ ಕಿಶೋರ್ ಆಚಾರ್ ಹಾಗೂ ಕಟ್ಟಿ ರಾಘವೇಂದ್ರ ಆಚಾರ್ ಇವರ ಪೌರೋಹಿತ್ಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಪೂಜೆಯ ಕಾರ್ಯಕ್ರಮವು ವಿಶೇಷವಾಗಿ ಪುಷ್ಪಾರ್ಚನೆ ಹಾಗೂ ಕಥಾಶ್ರವಣದೊಂದಿಗೆ ನೆರವೇರಿತು.


ಈ ಸಂದರ್ಭದಲ್ಲಿ ಶ್ರೀಮಠದ ಸಿಬ್ಬಂದಿಗಳು ಹಾಗೂ ನೂರಾರು ಭಕ್ತರು ಪೂಜೆಯಲ್ಲಿ ಭಾಗವಹಿಸಿ ಪ್ರಸಾದವನ್ನು ಸ್ವೀಕರಿಸಿ ಶ್ರೀ ಹರಿವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು. ಈ ದಿನ ಸಂಜೆ 5 ಕ್ಕೆ ಜೆ. ಪಿ. ನಗರದ ಗಾಯತ್ರಿ ಮಹಿಳಾ ಭಜನಾ ಮಂಡಳಿಯವರಿಂದ ಶ್ರೀ ಹರಿ ಭಜನೆ ನೆರವೇರಲಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   


إرسال تعليق

0 تعليقات
إرسال تعليق (0)
To Top