ಡಿ.ದೇವರಾಜ ಅರಸು ಜನ್ಮ ದಿನಾಚರಣೆ

Upayuktha
0

ಉಡುಪಿ: ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ ಉಡುಪಿ  ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ, ರಾಜ್ಯದ ಮಾಜಿ ಮಉಖ್ಯಮಂತ್ರಿ ದಿ.ಶ್ರೀ.ಡಿ ದೇವರಾಜ ಅವರಸು ಅವರ 108 ನೇ ಜನ್ಮ ದಿನಾಚರಣೆ ಕಾರ್ಯಕ್ರಮವು ಆಗಸ್ಟ್ 20 ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.

       

ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದಾರೆ.

ಶಾಸಕ ಯಶ್ಪಾಲ್ ಎ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. 

 

ಮುಖ್ಯ ಅತಿಥಿಗಳಾಗಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಎಲ್.ಭೋಜೆಗೌಡ, ಡಾ.ತೇಜಸ್ವಿನಿ ಗೌಡ ಹಾಗೂ ಮಂಜುನಾಥ ಭಂಡಾರಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

         

ದೇವರಾಜ ಅರಸು ಅವರ ವ್ಯಕ್ತಿತ್ವ ಮತ್ತು ಸಾಧನೆ ಕುರಿತು ರಾಷ್ಟ್ರ ಪ್ರಶಸ್ತಿ ವಿಜೇತ ಮಾಜಿ ಶಿಕ್ಷಕ ಹಾಗೂ ಡಿ.ದೇವರಾಜ ಅರಸು ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತರಾದ ಮಲ್ಪೆ ರಾಘವೇಂದ್ರ ಉಪನ್ಯಾಸ ನೀಡಲಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter    

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top