ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಇತ್ತೀಚೆಗೆ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಮುಲ್ಲೈ ಮುಗಿಲನ್ ಅವರನ್ನು ಅಭಿನಂದಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಸಾಹಿತ್ಯ ಕಾರ್ಯಕ್ರಮಗಳ ವಿವರಗಳನ್ನು ಅವರಿಗೆ ನೀಡಲಾಯಿತು. ಜಿಲ್ಲಾ ವತಿಯಿಂದ ಪೂರ್ಣ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಜಿಲ್ಲೆಯಲ್ಲಿ ಕನ್ನಡ ಭವನದ ಬಗ್ಗೆ ಬೇಡಿಕೆ ಸಲ್ಲಿಸಿದಾಗ ಪರಿಶೀಲಿಸಿ ಮುಂದಿನ ಕ್ರಮ ತೆಗೆದು ಕೊಳ್ಳುವುದಾಗಿ ತಿಳಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ಅರ್ಜಿಯನ್ನು ಈ ಸಂದರ್ಭದಲ್ಲಿ ಅವರಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ, ಸಂಘಟನಾ ಕಾರ್ಯದರ್ಶಿ ಜಗದೀಶ ಎಡಪಡಿತ್ತಾಯ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರಾದ ಸನತ್ ಕುಮಾರ್ ಜೈನ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ