ಸುರತ್ಕಲ್: ಬದುಕು ರೂಪಿಸಿದ ಶಿಕ್ಷಣ ಸಂಸ್ಥೆಗಳನ್ನು ಸದಾ ನೆನಪಿಸಿಕೊಳ್ಳಬೇಕು ಎಂದು ಗೋವಿಂದದಾಸ ಕಾಲೇಜಿನ ಹಳೆ ವಿದ್ಯಾರ್ಥಿನಿ ಹಾಗೂ ಸಮಾಜ ಸೇವಕಿ ಲೀಲಾ ಅಮೃತ್ ನುಡಿದರು. ಅವರು ಸುರತ್ಕಲ್ ಗೋವಿಂದದಾಸ ಕಾಲೇಜ್ ಅಲ್ಯುಮ್ನಿ ಅಸೋಸಿಯೇಶನ್‍ನ ಸಂಗಮ ಸಂಭ್ರಮ ನಲುಮೆಯ ನೆನಪಿನ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡುತ್ತಿದ್ದರು.
ಅಲ್ಯುಮ್ನಿ ಅಸೋಸಿಯೇಶನ್‍ನ ಅಧ್ಯಕ್ಷರಮೇಶ್‍ರಾವ್ ಎಂ. ಮಾತನಾಡಿ ಹಳೆ ವಿದ್ಯಾರ್ಥಿಗಳು ಕಾಲೇಜಿನಅಭಿವೃದ್ಧಿಗೆ ಶ್ರಮಿಸಬೇಕಾಗಿದೆ. ಕಾಲೇಜಿನ ಹಿರಿಯಅಧ್ಯಾಪಕರು ಹಾಗೂ ಹಳೆ ವಿದ್ಯಾರ್ಥಿಗಳು ಸಂಗಮ ಸಂಭ್ರಮ ನೆನಪಿನ ಸಂಚಿಕೆಯ ಮೂಲಕ ತಮ್ಮ ಮಧುರ ನೆನಪುಗಳನ್ನು ದಾಖಲಿಸಿದ್ದಾರೆ ಎಂದರು.
ಕಾಲೇಜಿನ ಹಳೆ ವಿದ್ಯಾರ್ಥಿನಿ ಮತ್ತುರಾಷ್ಟ್ರಮಟ್ಟದಕ್ರೀಡಾಪಟು ಸುನೀತಾಕೇಶವ್ ಹಾಗೂ ಗೋವಿಂದದಾಸಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಅಲ್ಯುಮ್ನಿ ಅಸೋಸಿಯೇಶನ್‍ನ ಸಲಹೆಗಾರ ಪ್ರೊ. ವೈ.ವಿ. ರತ್ನಾಕರರಾವ್ ಶುಭ ಹಾರೈಸಿದರು.
ಸುರತ್ಕಲ್ ರೋಟರಿಕ್ಲಬ್‍ನ ಅಧ್ಯಕ್ಷ ಯೋಗೀಶ್ ಕುಳಾಯಿ, ಅಲ್ಯುಮ್ನಿ ಅಸೋಸಿಯೇಶನ್‍ನ ಉಪಾಧ್ಯಕ್ಷೆಡಾ. ಸಾಯಿಗೀತಾ, ಕಾರ್ಯಕಾರಿ ಸಮಿತಿಯ ಸದಸ್ಯ ಉದಯ್ ಭಾಸ್ಕರ್‍ವೈ.ವಿ, ಸಂಪಾದಕ ಮಂಡಳಿಯ ಸದಸ್ಯಕುಂಬ್ಳೆ ಗೋಪಾಲಕೃಷ್ಣ ಭಟ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಹರೀಶ್‍ಕುಮಾರ್, ಉಪಪ್ರಾಂಶುಪಾಲ ಪ್ರೊ. ರಮೇಶ್ ಭಟ್‍ಎಸ್.ಜಿ, ಆಂತರಿಕ ಗುಣಮಟ್ಟ ಖಾತರಿಕೋಶದ ಸಂಯೋಜಕ ಪ್ರೊ. ಹರೀಶಆಚಾರ್ಯ ಪಿ, ಪ್ರೊ. ವಾಮನ ಕಾಮತ್, ಕಾಲೇಜಿನ ಸ್ಟಾಫ್ ಅಸೋಸಿಯೇಶನ್‍ನ ಕಾರ್ಯದರ್ಶಿ ಗೀತಾ ಕೆ. ಮತ್ತಿತರರು ಉಪಸ್ಥಿತರಿದ್ದರು. ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ ಸ್ವಾಗತಿಸಿದರು. ಅಲ್ಯುಮ್ನಿ ಅಸೋಸಿಯೇಶನ್‍ನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ