ಸುರತ್ಕಲ್: ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಕ್ಷಮತೆಯನ್ನು ಹೆಚ್ಚಿಸುವುದರ ಜೊತೆಗೆ ಭೌದ್ಧಿಕವಾಗಿಯೂ ಪ್ರಭುಧ್ದತೆಯನ್ನು ನೀಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಆಸಕ್ತಿಯಿಂದ ಭಾಗವಹಿಸಬೇಕು ಎಂದು ಗೋವಿಂದ ದಾಸ ಕಾಲೇಜಿನ ಪ್ರಾಚಾರ್ಯ ಪ್ರೊ. ಕೃಷ್ಣಮೂರ್ತಿ ಪಿ. ನುಡಿದರು.
ಅವರು ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶಮತ್ತು ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಉಪಪ್ರಾಚಾರ್ಯ ಪ್ರೊ. ರಮೇಶ್ ಭಟ್ ಎಸ್.ಜಿ. ಶುಭ ಹಾರೈಸಿದರು.
ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪ್ರಶಾಂತ್ ಎಂ.ಡಿ. ಹಾಕಿ ಕ್ರೀಡೆಯಲ್ಲಿ ಮೇಜರ್ ಧ್ಯಾನ್ ಚಂದ್‍ರ ಅದ್ವೀತೀಯ ಸಾಧನೆಗಳ ಬಗ್ಗೆ ಮತ್ತು ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.
ಪ್ರಿತೇಶ್ ಸ್ವಾಗತಿಸಿ ನಿರ್ಮಿಕ ಧನ್ಯವಾದಗೈದರು. ಹಿತಾ ಉಮೇಶ್ ಕಾರ್ಯಕ್ರಮ ನಿರೂಪಿಸಿದರು.
ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕರಾದ ಪ್ರೊ. ಹರೀಶ್ ಆಚಾರ್ಯ ಪಿ., ಪ್ರೊ. ನೀಲಪ್ಪ ವಿ., ಉಪನ್ಯಾಸಕರಾದ ಪ್ರೊ. ವಾಮನ ಕಾಮತ್, ಪ್ರೊ. ಕುಮಾರ ಮಾದರ, ಡಾ. ಆಶಾ, ಡಾ. ಸುಜಾತ ಬಿ. ಮತ್ತು ವಿನೋದ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ