ಹಾಸನ: ವಸಂತಕುಮಾರ್‍ ಏಕವ್ಯಕ್ತಿ ಪ್ರಕೃತಿ ಚಿತ್ರಕಲಾ ಪ್ರದರ್ಶನ

Upayuktha
0

ಹಾಸನ: ಹಾಸನದ ಚಿತ್ರಕಲಾ ಶಿಕ್ಷಕರು, ಕಲಾವಿದರು ವಸಂತಕುಮಾರ್‍ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು ಹಾಸನಾಂಬ ಕಲಾಕ್ಷೇತ್ರದಲ್ಲಿ ಎರಡು ದಿನ ಏರ್ಪಡಿಸಲಾಗಿದೆ. ದಿನಾಂಕ 20-8-2023ರ ಭಾನುವಾರ ಬೆಳಿಗ್ಗೆ 10-30ಕ್ಕೆ ಹಾಸನ ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮರವರು ಕಾರ್ಯಕ್ರಮವನ್ನು ಉದ್ಘಾಟಿಸುವರು. 


ಅಂತಾರಾಷ್ಟ್ರೀಯ ಚಿತ್ರಕಲಾವಿದರಾದ ಕೆ.ಟಿ.ಶಿವಪ್ರಸಾದ್‍ರವರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ಚಿತ್ರಕಲಾ ಸ್ಫರ್ಧೆಯಲ್ಲಿ ವಿಜೇತರಾಗಿರುವ ಮಕ್ಕಳಿಗೆ ಬಹುಮಾನವನ್ನು ಡಾ.ಹೆಬ್ಬಾಲೆ ಕೆ.ನಾಗೇಶ್, ಕನ್ನಡ ವಿಶ್ವವಿದ್ಯಾಲಯ, ಹಂಪಿ, ಡಾ. ಸುದರ್ಶನ್, ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಎಸ್.ಹೆಚ್.ಲಕ್ಷ್ಮೇಗೌಡರು, ಉಪ ನಿರ್ದೇಶಕರು, ಸಮಾಜಕಲ್ಯಾಣ ಇಲಾಖೆ. ಗೊರೂರುಅನಂತರಾಜು, ಸಾಹಿತಿಗಳು, ಹೆಚ್.ಎಸ್. ಸತೀಶ್, ತಾಲ್ಲೂಕು ಸಮಾಜಕಲ್ಯಾಣ ಇಲಾಖೆ, ನಾಗರಾಜ್ ಹೆತ್ತೂರು, ಭೀಮ ವಿಜನ ದಿನಪತ್ರಿಕೆ ಸಂಪಾದಕರು, ಹಾಗೂ ಸುವರ್ಣ ಕೆ.ಟಿ.ಶಿವಪ್ರಸಾದ್ ಲೇಖಕರು ಇವರುಗಳು ನೆರವೇರಿಸಿಕೊಡುವರು. 


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top