ಮಂಗಳೂರು: ಸುಮಾರು ರೂ. 19.32 ಕೋಟಿ ವೆಚ್ಚದಲ್ಲಿ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣವನ್ನು ಅಂತಾರಾಷ್ಟ್ರೀಯ ದರ್ಜೆಯಲ್ಲಿ ನಿರ್ಮಾಣ ಮಾಡಲು ವಿಶೇಷ ಅನುದಾನ ಬಿಡುಗಡೆಗೊಳಿಸಿದ್ದು ಇದರ ಶೀಲಾನ್ಯಾಸ ಕಾರ್ಯಕ್ರಮ ನಡೆಯಿತು. ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆಯನ್ನು ನೀಡಿದರು.
ಸಾಧರಣ ಹಳ್ಳಿ ಗ್ರಾಮೀಣ ಪ್ರದೇಶದಿಂದ ಬಂದು ಸಂಘದ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದು ಬುದ್ದಿವಂತರ ಜಿಲ್ಲೆಯೆಂದೆ ಹೆಸರಾಗಿರುವ ದ.ಕ ಜಿಲ್ಲೆಯ ಸಂಸದರಾಗಿ ಹ್ಯಾಟ್ರಿಕ್ ಸಾಧನೆಯನ್ನು ಮಾಡಿರುವ ಮಂಗಳೂರು ನಗರ ಮತ್ತು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅನುದಾನಗಳ ಮಹಾಪೂರವನ್ನೆ ಹರಿಸಿರುವ ಜನರ ನೆಚ್ಚಿನ ಸಂಸದರಾದ ನಳಿನ್ ಕುಮಾರ್ ಕಟೀಲ್ ಇನ್ನಷ್ಟು ಸಮಯ ಜನಪ್ರತಿನಿಧಿಯಾಗಿ ಜನರ ಸೇವೆ ಮಾಡಬೇಕೆಂದು ಜಿಲ್ಲೆಯ ಜನರು ಬಯಸುವುದರಲ್ಲಿ ತಪ್ಪಿಲ್ಲ.
ಸಂಸದ ಕಟೀಲ್ ರವರ ನಿರಂತರ ಪ್ರಯತ್ನದಿಂದಾಗಿ ಅಮೃತ ಭಾರತ್ ರೈಲ್ವೇ ನಿಲ್ದಾಣ ಯೋಜನೆಯಡಿಯಲ್ಲಿ ಮಂಗಳೂರು ಜಂಕ್ಷನ್ನಲ್ಲಿ ವಿವಿಧ ರೈಲ್ವೆ ನಿಲ್ದಾಣಗಳ ಮೇಲ್ದರ್ಜೆ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ದೀಪ ಬೆಳಗಿಸಿ ಚಾಲನೆಯನ್ನು ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ಜಿಲ್ಲೆಯ ಶಾಸಕರು, ಮಂಗಳೂರು ಮಹಾನಗರಪಾಲಿಕೆ ಮಹಾಪೌರರು, ಉಪ ಮಹಾಪೌರರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ