ಉಡುಪಿ: ಪರಿಷತ್ತಿನ ಈ ಆರ್ಥಿಕ ವರುಷದ ಮೊದಲ ಕಾರ್ಯಕ್ರಮ ಬಾಲಪ್ರತಿಭೋತ್ಸವ-2023 ಕಾರ್ಯಕ್ರಮ ಆಗಸ್ಟ್ 6ರಂದು ಭಾನುವಾರ ಸಂಜೆ 3-30ಕ್ಕೆ ಉಡುಪಿಯ ಅಂಬಲಪಾಡಿಯ ಜನಾರ್ದನ ಮಹಾಕಾಳಿ ದೇವಸ್ಥಾನದ ಭವಾನಿಮಂಟಪದಲ್ಲಿ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ಜರುಗಲಿದೆ.
ದೇವಳದ ಧರ್ಮದರ್ಶಿಗಳಾದ ಡಾ|| ನಿ.ಬಿ.ವಿಜಯಬಲ್ಲಾಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು ಕಾರ್ಯಕ್ರಮವು ಪರಿಷತ್ತಿನ ಅಧ್ಯಕ್ಷರಾದ ಯು.ಕೆ.ಪ್ರವೀಣ್ ರವರ ಸಭಾಧ್ಯಕ್ಷತೆಯಲ್ಲಿ ಮತ್ತು ಪರಿಷತ್ತಿನ ಎಲ್ಲಾ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಲಿರುವುದು. ಉಡುಪಿಯ 14 ಜನ ಬಾಲಪ್ರತಿಭೆಗಳು ನೃತ್ಯಪ್ರದರ್ಶನ ನೀಡಲಿರುವರು ಎಂದು ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತು ಮಂಗಳೂರು ಇದರ ಕಾರ್ಯದರ್ಶಿ ಕೆ. ಸುಧೀರ್ ರಾವ್ ಕೊಡವೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ