ಕೊಯ್ಯೂರು ಪ್ರೌಢಶಾಲೆ: ಛಾಯಾಚಿತ್ರ, ಸಾಕ್ಷ್ಯಚಿತ್ರಗಳ ಪ್ರದರ್ಶನ

Upayuktha
0

ಮಂಗಳೂರು: 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಪ್ರಾಧ್ಯಾಪಕ ಡಾ. ಪ್ರಶಾಂತ ನಾಯ್ಕ ಇವರ ಸಂಗ್ರಹದ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಅನೇಕ ಐತಿಹಾಸಿಕ ಘಟನೆಗಳ ಛಾಯಾಚಿತ್ರಗಳು  ಮತ್ತು ಸಾಕ್ಷ್ಯಚಿತ್ರಗಳನ್ನು ಪ್ರದರ್ಶನಕ್ಕಿಡಲಾಗಿತ್ತು.


1886 ರಲ್ಲಿ ಇಂಗ್ಲೆಂಡ್ಗೆ ಮೊದಲ ಭಾರತೀಯ ಕ್ರಿಕೆಟ್ ತಂಡದ ಪ್ರವಾಸ, 1893 ರಲ್ಲಿ  ನಡೆದ ಧರ್ಮ ಸಂಸತ್ತಿನಲ್ಲಿ ಸ್ವಾಮಿ ವಿವೇಕಾನಂದರು  ಉಪನ್ಯಾಸ ನೀಡಲು ಅಮೆರಿಕಾದ  ಚಿಕಾಗೋಕ್ಕೆ ಹೋದ ಸಂದರ್ಭ, 11 ಆಗಸ್ಟ್ 1908ರಂದು ಸ್ವಾತಂತ್ರ್ಯ ಹೋರಾಟಗಾರ  ಖುದಿರಾಮ್ ಬೋಸ್ ಅವರನ್ನು  ಮರಣದಂಡನೆ ಶಿಕ್ಷೆಗೆ ಗುರಿಪಡಿಸಿರುವ  ದೃಶ್ಯ ಹೀಗೆ ಅಪರೂಪದ ಚಿತ್ರಗಳು ನೋಡುಗರ ಗಮನ ಸೆಳೆದವು. ವಿಡಿಯೋ ಸಾಕ್ಷ್ಯಚಿತ್ರಗಳನ್ನು  ಕ್ಯೂಆರ್‌ ಕೋಡ್ ಸ್ಕ್ಯಾನ್ ಮಾಡಿ ಸ್ಮಾರ್ಟ್ ಫೋನ್ ನಲ್ಲಿ ವೀಕ್ಷಿಸುವ ಅವಕಾಶ ಕಲ್ಪಿಸಲಾಗಿತ್ತು.


ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಪ್ರೊ. ಪ್ರಶಾಂತ ನಾಯ್ಕ, "ಜೀವನವನ್ನೇ ಮುಡಿಪಾಗಿಟ್ಟು ಬ್ರಿಟಿಷ್ ವಸಾಹತುಶಾಹಿಯ ಆಡಳಿತದ ವಿರುದ್ಧ ಹೋರಾಡಿ ಸ್ವಾತಂತ್ರ್ಯವನ್ನು ಗಳಿಸಿಕೊಟ್ಟ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ  ಅವರಿಗೆ ಗೌರವಾರ್ಪಣೆ   ಸಲ್ಲಿಸುವುದು ನಮ್ಮ ಕರ್ತವ್ಯ. ಸಮಾಜಮುಖಿ ಚಟುವಟಿಕೆಗಳಲ್ಲಿ ಭಾಗಿಯಾಗಿ ರಾಷ್ತ್ರದ ಸುಸ್ಥಿರ ಅಭಿವೃದ್ಧಿಗೆ ಕೈಜೋಡಿಸುವುದು ನಮ್ಮೆಲ್ಲರ ಜವಾಬ್ದಾರಿ,” ಎಂದರು. ಶಾಲೆಯ ಮುಖ್ಯೋಪಾಧ್ಯಾಯ ರಾಧಾಕೃಷ್ಣ ಟಿ. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಸ್ವಾತಂತ್ರ್ಯ ಅಂದರೆ  ಸ್ವೇಚ್ಛಾಚಾರವಲ್ಲ. ನಮಗೆ ಸಂವಿಧಾನ ನೀಡಿರುವ ಕರ್ತವ್ಯಗಳು ಮತ್ತು  ಹಕ್ಕುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸದೃಢ ದೇಶ ಕಟ್ಟುವ ಕಟ್ಟುವ ಕೆಲಸದಲ್ಲಿ ನೆರವಾಗಬೇಕು, ಎಂದು ಹೇಳಿದರು. 


ಈ ಸಂದರ್ಭದಲ್ಲಿ ದಿವಂಗತ  ಡೊಂಬಯ್ಯ ಗೌಡ ಜೇಂಕಿನಡ್ಕ ಇವರ ಸ್ಮರಣಾರ್ಥ ನೂತನ ಧ್ವಜಸ್ಥಂಭದ ಉದ್ಘಾಟನೆಯನ್ನು   ಅವರ ಪತ್ನಿ ಗೀತಾ ಅವರು ನೆರೆವೇರಿಸಿದರು. ಮುಖ್ಯ ಅತಿಥಿಗಳಾಗಿ    ಜೇಸಿ ಬೆಳ್ತಂಗಡಿ ಅಧ್ಯಕ್ಷ ಜೇಸಿ ಶಂಕರ್ ರಾವ್ ,  ಕೊಯ್ಯುರು ಗ್ರಾಮ ಪಂಚಾಯತ್  ಉಪಾಧ್ಯಕ್ಷ ಹರೀಶ್ ಕುಮಾರ್ , ಶಾಲೆಯ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಮೊದಲಾದವರು ಉಪಸ್ಥಿತರಿದ್ದರು.


ಮೋಹನದಾಸ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಬೇಬಿ ಸ್ವಾಗತಿಸಿದರು. ರಾಮಚಂದ್ರ  ದೊಡ್ಮನಿ ಅವರು ಭಾರತ  ಸ್ವಾತಂತ್ರ್ಯ ಹೋರಾಟದ ಒಂದು ಪಕ್ಷಿನೋಟ ನೀಡಿದರು. ಕುಮಾರಿ ನಿಶ್ಮಿತ  ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ಭಾಷಣ ಮಾಡಿದರು.‌ ಸುಧಾಕರ ಶೆಟ್ಟಿ ವಂದನಾರ್ಪಣೆ ಗೈದರು. ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳು ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top