ಮಂಗಳೂರು: ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ

Upayuktha
0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ 15 ಘಟಕಗಳ ಘಟಕಾಧಿಕಾರಿಗಳ ಸಭೆ ನಗರದ ಮೇರಿಹಿಲ್‍ನಲ್ಲಿರುವ ಗೃಹರಕ್ಷಕ ದಳದ ಕಛೇರಿಯಲ್ಲಿ ಇಂದು ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದಿನಾಂಕ: 24-08-2023 ರಂದು ನಡೆಯುವ ಮಾನಸಿಕ ಆರೋಗ್ಯ ಮತ್ತು ಮಾದಕ ದ್ರವ್ಯ ಜಾಗೃತಿ ಕಾರ್ಯಗಾರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಗೃಹರಕ್ಷಕರನ್ನು ನಿಯೋಜಿಸುವ ಕುರಿತು, ಆಯುಕ್ತರ ಕಛೇರಿಗೆ ಹೆಚ್ಚುವರಿ ಗೃಹರಕ್ಷಕರನ್ನು ನಿಯೋಜಿಸುವ ಬಗ್ಗೆ, ಕವಾಯತು ಹಾಜರಾತಿ ಪಟ್ಟಿಯನ್ನು 5ನೇ ತಾರೀಖಿನೊಳಗೆ ನೀಡುವ ಕುರಿತು, ಮುಂಬರುವ ಚುನಾವಣಾ ಕರ್ತವ್ಯಕ್ಕೆ ಗೃಹರಕ್ಷಕರನ್ನು  ನಿಯೋಜಿಸುವ ಬಗ್ಗೆ ಚರ್ಚಿಸಲಾಯಿತು. 


ಗೃಹರಕ್ಷಕರ ಕ್ಷೇಮಾಭಿವೃದ್ದಿ ನಿಧಿಗೆ ವಂತಿಗೆಯನ್ನು ಕಟ್ಟಲು ಬಾಕಿ ಇರುವ ಗೃಹರಕ್ಷಕರ ಬಗ್ಗೆ, ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಚರ್ಚಿಸಲಾಯಿತು. ಮೂರು ವರ್ಷಗಳನ್ನು ಮೀರಿದ ಗೃಹರಕ್ಷಕರು ನವೀಕರಣ ಮಾಡಿಸಲು ಸೂಚಿಸಲಾಯಿತು ಹಾಗೂ ಗೃಹರಕ್ಷಕರ ಕುಂದುಕೊರತೆಗಳ ಬಗ್ಗೆ ಚರ್ಚಿಸಲಾಯಿತು. ಉಪಸಮಾದೇಷ್ಟರಾದ ರಮೇಶ್ ಅವರು ಸ್ವಾಗತ ಭಾಷಣ ಮಾಡಿದರು. ಕಛೇರಿಯ ಪ್ರಥಮ ದರ್ಜೆ ಸಹಾಯಕಿ  ಶ್ಯಾಮಲಾ ರವರು ಉಪಸ್ಥಿತರಿದ್ದರು. 


ಈ ಸಂದರ್ಭದಲ್ಲಿ 15 ಘಟಕಗಳ ಘಟಕಾಧಿಕಾರಿಗಳಾದ ಮಾರ್ಕ್‍ಶೇರ್, ಸೀನಿಯರ್ ಪ್ಲಟೂನ್ ಕಮಾಂಡರ್, ಮಂಗಳೂರು ಘಟಕ, ಐತಪ್ಪ, ಘಟಕಾಧಿಕಾರಿ, ಬಂಟ್ವಾಳ ಘಟಕ, ಅಭಿಮನ್ಯು ರೈ, ಘಟಕಾಧಿಕಾರಿ ಪುತ್ತೂರು ಘಟಕ, ತೀರ್ಥೇಶ್ ಘಟಕಾಧಿಕಾರಿ ಕಡಬ ಘಟಕ, ಪ್ರಭಾರ ಘಟಕಾಧಿಕಾರಿಗಳಾದ ಎಂ. ಭಾಸ್ಕರ್, ಉಳ್ಳಾಲ ಘಟಕ, ಲೋಕೇಶ್, ಮೂಲ್ಕಿ ಘಟಕ, ದಿನೇಶ್ ಉಪ್ಪಿನಂಗಡಿ ಘಟಕ, ರಮೇಶ್ ಸುರತ್ಕಲ್ ಘಟಕ, ಹರಿಶ್ಚಂದ್ರ  ಸುಬ್ರಹ್ಮಣ್ಯ ಘಟಕ, ಜಯಾನಂದ ಬೆಳ್ತಂಗಡಿ ಘಟಕ, ಸೋಮನಾಥ, ಸುಳ್ಯ ಘಟಕ, ಶಿವಪ್ಪ ನಾಯ್ಕ ಪಣಂಬೂರು ಘಟಕ, ಉಮೇಶ್ ಬಂಗೇರಾ ವಿಟ್ಲ ಘಟಕ ಇವರುಗಳು ಉಪಸ್ಥಿತರಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top