ಇಂದು ಮಂಗಳೂರು ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಘಟಕಾಧಿಕಾರಿಗಳ ಸಭೆ

Upayuktha
0

 


ಮಂಗಳೂರು: 22-08-2023ನೇ ಮಂಗಳವಾರದಂದು ಬೆಳಿಗ್ಗೆ 11.00 ಗಂಟೆಗೆ ಜಿಲ್ಲಾ ಗೃಹರಕ್ಷಕ ದಳ ಕಛೇರಿ, ಮೇರಿಹಿಲ್, ಮಂಗಳೂರು ಇಲ್ಲಿ ದಕ್ಷಿಣ  ಕನ್ನಡ ಜಿಲ್ಲೆಯ ಎಲ್ಲಾ 15 ಘಟಕಗಳಾದ ಮಂಗಳೂರು ಉಳ್ಳಾಲ, ಪಣಂಬೂರು, ಸುರತ್ಕಲ್, ಮೂಲ್ಕಿ, ಮೂಡಬಿದ್ರಿ, ಬಂಟ್ವಾಳ, ವಿಟ್ಲ, ಪುತ್ತೂರು, ಕಡಬ, ಉಪ್ಪಿನಂಗಡಿ, ಬೆಳ್ತಂಗಡಿ, ಸುಳ್ಯ, ಬೆಳ್ಳಾರೆ, ಸುಬ್ರಹ್ಮಣ್ಯ ಘಟಕಗಳ ಘಟಕಾಧಿಕಾರಿಗಳ ಸಭೆ ನಡೆಯಲಿರುವುದು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ಪೌರರಕ್ಷಣಾ ಪಡೆ ಚೀಫ್ ವಾರ್ಡನ್ ಡಾ. ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. 


ಮುಂಬರುವ ಚುನಾವಣೆಗೆ ಗೃಹರಕ್ಷಕರನ್ನು ನಿಯೋಜಿಸುವ ಕುರಿತು, ಗೃಹರಕ್ಷಕರ ಕುಂದುಕೊರತೆಗಳ ಬಗ್ಗೆ, ಹೊಸ ಗೃಹರಕ್ಷಕರನ್ನು ನೊಂದಾಯಿಸುವ ಕುರಿತು ಹಾಗೂ ನಿಷ್ಕ್ರಿಯ ಗೃಹರಕ್ಷಕರನ್ನು ಸಮಾಲೋಪನೆಗೊಳಿಸುವ ಕುರಿತು ಚರ್ಚೆ ನಡೆಸಲು ಈ ಸಭೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ಪೌರರಕ್ಷಣಾ ಪಡೆ ಚೀಫ್‍ವಾರ್ಡನ್ ಡಾ. ಮುರಲೀ ಮೋಹನ್ ಚೂಂತಾರು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

إرسال تعليق

0 تعليقات
إرسال تعليق (0)
To Top