ಪರಿಸರ ಅಸಮತೋಲನವನ್ನು ತಪ್ಪಿಸೋಣ : ಡಾ ಚೂಂತಾರು

Upayuktha
0

ಪಣಂಬೂರು ಘಟಕದಲ್ಲಿ ವನಮಹೋತ್ಸವ ಆಚರಣೆ

ಮಂಗಳೂರು: ಪಣಂಬೂರು ಘಟಕದ ವತಿಯಿಂದ  ಶ್ರೀ ನಂದನೇಶ್ವರ ದೇವಸ್ಥಾನದ ಆವರಣದಲ್ಲಿ ಭಾನುವಾರದಂದು ಸಸಿ ನೆಡುವ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ನಿರಂತರವಾಗಿ ಪರಿಸರದ ಮೇಲಿನ ದೌರ್ಜನ್ಯದಿಂದಾಗಿ ಕಾಡು ಬರಿದಾಗಿ, ಕಾಂಕ್ರೀಟ್ ಕಾಡು ದಿನೇ ದಿನೇ  ಬೆಳೆಯುತ್ತಿದೆ. ಪರಿಸರ ಮಾಲಿನ್ಯ ಹೆಚ್ಚುತ್ತಲೇ ಇದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಈಗಲೇ ಎಚ್ಚೆತ್ತುಕೊಂಡು  ಗಿಡ ನೆಟ್ಟು ಪೋಷಿಸಿ, ಕಾಡು ಉಳಿಸಬೇಕು. ಪರಿಸರದ ಅಸಮತೋಲನವಾಗದಂತೆ  ನೋಡಿಕೊಳ್ಳಬೇಕು.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರೆಗೆ ಈ ವರ್ಷದಲ್ಲಿ ಸುಮಾರು 1000 ಸಸಿಗಳನ್ನು ನೆಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಗಿಡ ನೆಟ್ಟು ಹಸಿರು ಬೆಳೆಸಿದಲ್ಲಿ ಆರೋಗ್ಯ ಪೂರ್ಣ ಸಮಾಜ ನಿರ್ಮಾಣವಾಗಲಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಸಿಗಳನ್ನು ನೆಡುವ ಕಾರ್ಯ ಯೋಜನೆ ಸಿದ್ದಪಡಿಸಲಾಗಿದೆ ಎಂದು ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ನುಡಿದರು. ದೇವಸ್ಥಾನದ ಆವರಣದಲ್ಲಿ ಬಿಲ್ವ ಪತ್ರೆ, ಮಾವು, ನೇರಳೆ, ಪೇರಳೆ, ಹಲಸು, ಹೆಬ್ಬಲಸು ಮುಂತಾದ ಗಿಡಗಳನ್ನು ಹಾಗೂ ಹೂವಿನ ಗಿಡಗಳನ್ನು ನೆಡಲಾಯಿತು.


ಈ ಸಂದರ್ಭದಲ್ಲಿ ದೇವಳದ ಭಕ್ತಿ ಶ್ರೀ ಗಣಪತಿ ಐತಾಳ, ಮಾಜಿ ಘಟಕಾಧಿಕಾರಿ ಶ್ರೀ ಹರೀಶ್ ಆಚಾರ್ಯ,ಪಣಂಬೂರು ಘಟಕದ ಪ್ರಭಾರ ಘಟಕಾಧಿಕಾರಿ ಶಿವಪ್ಪ ನಾಯ್ಕ್, ಹಿರಿಯ  ಗ್ರಹ ರಕ್ಷಕರಾದ ಶ್ರೀ ಜಗದೀಶ್, ಶ್ರೀ ಗಂಗಾಧರ ಮತ್ತು ಪಣಂಬೂರು ಘಟಕದ ಎಲ್ಲಾ ಗೃಹರಕ್ಷಕ ಹಾಗೂ ಗೃಹರಕ್ಷಕಿಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top