ಮಂಗಳೂರು: ಮಂಗಳಾದೇವಿಯಲ್ಲಿಯಲ್ಲಿರುವ ಶ್ರೀರಾಮಕೃಷ್ಣ ಮಠದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬೆಳಗ್ಗೆ 7:30ಕ್ಕೆ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಗುವುದು.
ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜಿ ಅವರು ದಿವ್ಯ ಉಪಸ್ಥಿತಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ನಿಧಿಲ್ಯಾಂಡ್ ಇನ್‌ಫ್ರಾಸ್ಟ್ರಕ್ಚರ್ ಆಡಳಿತ ನಿರ್ದೇಶಕ ಪ್ರಶಾಂತ್ ಕುಮಾರ್ ಸನಿಲ್ ಹಾಗೂ ವಿಶೇಷ ಅತಿಥಿಗಳಾಗಿ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮತ್ತು ಮಂಗಳೂರು ಮಹಾನಗರಪಾಲಿಕೆಯ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ