ಮಂಗಳೂರು: ಮಕ್ಕಳ ಸುರಕ್ಷಾ ನೀತಿ ಕಡ್ಡಾಯ ಮಾಡಲು ಸಲಹೆ

Upayuktha
0

ಮಂಗಳೂರು: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ. ನಾಗಣ್ಣಗೌಡ ಅವರು ಆ.21ರ ಸೋಮವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದರು.


ಈ ಸಂದರ್ಭದಲ್ಲಿ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣ ಮಾಡಲು ಅರಿವು ಮೂಡಿಸುವ ಹಾಗೂ 18 ವರ್ಷದೊಳಗಿನ ಡ್ರಗ್ಸ್ ವ್ಯಸನಕ್ಕೆ ಒಳಗಾದ ಮಕ್ಕಳಿಗೆ ಆಪ್ತ ಸಮಾಲೋಚನೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ಸೂಚನೆಗಳನ್ನು ನೀಡಿದರು.

 

ಪೋಕ್ಸೋ ಪ್ರಕರಣಗಳು, ಮಕ್ಕಳ ಮೇಲಿನ ದೌರ್ಜನ್ಯಗಳು ವರದಿಯಾಗದಂತೆ ಎಚ್ಚರ ವಹಿಸಬೇಕು ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸುರಕ್ಷಾ ನೀತಿಯನ್ನು ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ, ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಅಳವಡಿಸುವಂತೆ ಅವರು ನಿರ್ದೇಶನ ನೀಡಿದರು.


ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪಾಪಬೋವಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಾಲತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.  


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top