ರಾಜ್ಯಶಾಸ್ತ್ರ ವಿಷಯವನ್ನು ಇನ್ನಷ್ಟು ಶಾಲಾ ಕಾಲೇಜುಗಳಲ್ಲಿ ಬೋಧಿಸುವಂತಾಗಲಿ : ಪ್ರೊ. ಪಿ ಎಲ್‌ ಧರ್ಮ

Upayuktha
0

 ಮಂಗಳೂರು ವಿವಿ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ವಾರ್ಷಿಕ ಮಹಾಸಭೆ

ಮಂಗಳೂರು: ರಾಜ್ಯಶಾಸ್ತ್ರ ವಿಷಯ ಇನ್ನಷ್ಟು ಶಾಲಾ-ಕಾಲೇಜುಗಳಲ್ಲಿ ಬೋಧಿಸುವಂತಾಗಬೇಕು. ಇದರಿಂದ ಪ್ರಮುಖ ವಿಷಯಕ್ಕೆ ಹೆಚ್ಚಿನ ಪ್ರಾಧಾನ್ಯತೆ ಸಿಗುವುದರೊಂದಿಗೆ ಉಪನ್ಯಾಸಕರಿಗೂ ಉದ್ಯೋಗಾವಕಾಶ ಸೃಷ್ಟಿಯಾದಂತಾಗುತ್ತದೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಪಿ ಎಲ್‌ ಧರ್ಮ ಅಭಿಪ್ರಾಯಪಟ್ಟರು.


ನಗರದ ಬಂಟ್ಸ್‌ ಹಾಸ್ಟೆಲ್‌ನ ಶ್ರೀಮತಿ ಗೀತಾ ಎಸ್‌.ಎಂ ಶೆಟ್ಟಿ ಹಾಲ್‌ ನಲ್ಲಿ ಸೋಮವಾರ ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ವಾರ್ಷಿಕ ಮಹಾಸಭೆ ಮತ್ತು ನಿವೃತ್ತ ಪ್ರಾಧ್ಯಾಪಕರ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ 2019 ರ ಬಳಿಕ ನಿವೃತ್ತರಾದ ರಾಜ್ಯಶಾಸ್ತ್ರ ಉಪನ್ಯಾಸಕರರನ್ನು ಸನ್ಮಾನಿಸಲಾಯಿತು. ಸನ್ಮಾನಿತರ ಪರವಾಗಿ ಮಾತನಾಡಿದ ಹಿರಿಯ ಪ್ರಾಧ್ಯಾಪಕ ಪ್ರೊ. ರಾಜಾರಾಂ ತೋಳ್ಪಾಡಿ, ನಾವು ನಂಬಿಕೊಂಡ ಮೌಲ್ಯಗಳನ್ನು ಕೃತಿಗಿಳಿಸಿದರೆ ಮಾತ್ರ ಆದಕ್ಕೊಂದು ಬೆಲೆ, ಎಂದು ಉಪನ್ಯಾಸಕರಿಗೆ ಕಿವಿಮಾತು ಹೇಳಿದರು.


ಇದೇ ವೇಳೆ ಕಳೆದ ಮೂರು ವರ್ಷಗಳಲ್ಲಿ ನಿಧನರಾದ ವಿವಿ ಮಟ್ಟದ ಕಾಲೇಜುಗಳ ರಾಜ್ಯಶಾಸ್ತ್ರ ಉಪನ್ಯಾಕರ ನೆನಪಿಸಿಕೊಂಡು ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮಹಾವೀರ ಕಾಲೇಜಿನ ಡಾ. ಪ್ರವೀಣ ಕೆ ಮತ್ತು ಉಡುಪಿ ಎಂ.ಜಿ.ಎಂ ಕಾಲೇಜಿನ ವಿದ್ಯಾನಾಥ್‌ ಕಾರ್ಯಕ್ರಮ ನಡೆಸಿಕೊಟ್ಟರು. ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷೆ ಡಾ. ಶಾನಿ ಕೆ ಆರ್‌ ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯದರ್ಶಿ ಕೆನರಾ ಕಾಲೇಜಿನ ಡಾ. ಗಣೇಶ್‌ ಶೆಟ್ಟಿ ಧನ್ಯವಾದ ಸಮರ್ಪಿಸಿದರು. ಕೋಟ ಪಡುಕೆರೆಯ ಜಿಎಫ್‌ಜಿಸಿ ಕಾಲೇಜಿನ ಪಾಂಡುರಂಗ ಕಾರ್ಯಕ್ರಮ ನಿರೂಪಿಸಿದರು.


ಜಿಎಫ್‌ಜಿಸಿ ಪುತ್ತೂರಿನ ನಿವೃತ್ತ ಪ್ರಾಂಶುಪಾಲ ಪ್ರೊ. ಕ್ಸೇವಿಯರ್‌ ಡಿʼಸೋಜ, ಬಸ್ರೂರಿನ ಶ್ರೀ ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ದಿನೇಶ್‌ ಹೆಗ್ಡೆ, ಹಿರಿಯ ಪ್ರಾಧ್ಯಾಪಕರಾದ ಡಾ. ಲತಾ ಎ. ಪಂಡಿತ್‌, ಪ್ರೊ. ದಯಾನಂದ ನಾಯ್ಕ್‌ ಮೊದಲಾದವರು ಉಪಸ್ಥಿತರಿದ್ದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top