ವಿವಿ ಕಾಲೇಜು: ಸ್ನಾತಕೋತ್ತರ ಯೋಗ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Upayuktha
0

ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಬುಧವಾರ ಸ್ನಾತಕೋತ್ತರ ಯೋಗ ವಿಜ್ಞಾನ ವಿಭಾಗದ ವತಿಯಿಂದ ಸ್ನಾತಕೋತ್ತರ ಯೋಗ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ, ದೈಹಿಕ ಮತ್ತು ಮಾನಸಿಕ ಆರೋಗ್ಯದ ಉನ್ನತಿಗೆ ಯೋಗ ಬಹಳ ಮುಖ್ಯ. ಪ್ರತಿದಿನವೂ ಯೋಗಾಭ್ಯಾಸ ಮಾಡಬೇಕು.

ಯೋಗದಿಂದ ಮಾನಸಿಕ ಮತ್ತು ಶಾರೀರಿಕ ಆರೋಗ್ಯದ ವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ವಿಭಾಗದಲ್ಲಿ ಯೋಗವನ್ನು ಅಭ್ಯಸಿಸಿದ ತಮಗೆಲ್ಲರಿಗೂ ಮುಂದಿನ ಬದುಕು ಸುಖಕರವಾಗಿರಲಿ, ಎಂದು ಹಾರೈಸಿದರು.


ಸರ್ವರನ್ನು ಸ್ವಾಗತಿಸಿ ಪ್ರಸ್ತಾವಿಕ ಭಾಷಣ ಮಾಡಿದ ಸ್ನಾತಕೋತ್ತರ ಯೋಗ ವಿಜ್ಞಾನ ಮತ್ತು ಕ್ರೀಡಾ ವಿಭಾಗದ ಸಂಯೋಜಕ ಡಾ. ಕೇಶವಮೂರ್ತಿ, ಯೋಗ ಮತ್ತು ಕ್ರೀಡೆ ಇವೆರಡಕ್ಕೂ ಬಹಳಷ್ಟು ಅಂತರವಿದೆ. ಸ್ಪರ್ಧೆಗಳಿಗಾಗಿ ಯೋಗಾಭ್ಯಾಸ ಮಾಡುವುದರ ಬದಲು ಸುಖಕರ ಜೀವನಕ್ಕಾಗಿ ಯೋಗಾಭ್ಯಾಸ ಮಾಡಬೇಕು. ಏನನ್ನು ಕಲಿತಿರುವಿರೋ ಅದನ್ನು ತಮ್ಮ ಮುಂದಿನ ಬದುಕಿನಲ್ಲಿಯೂ ಅಳವಡಿಸಿಕೊಳ್ಳಿ ಎಂದು ಕಿವಿಮಾತು, ಹೇಳಿದರು.


ಈ ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಯೋಗ ವಿಭಾಗದ ಉಪನ್ಯಾಸಕರಾದ ಡಾ. ಅಜಿತೇಶ್, ಡಾ. ರಂಗಪ್ಪ, ಉಮನಾಥ್ , ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top