ಮೂಲ್ಕಿ ಗೃಹರಕ್ಷಕರಿಂದ ವನಮಹೋತ್ಸವ
ಈ ನಿಟ್ಟಿನಲ್ಲಿ ನಾವೆಲ್ಲಾ ಕೂಡಲೇ ಎಚ್ಚೆತ್ತುಕೊಂಡು ಗಿಡಗಳನ್ನು ನೆಟ್ಟು ಮರಗಳನ್ನು ಪೋಷಿಸಿ ಪರಿಸರವನ್ನು ರಕ್ಷಿಸಬೇಕು. ಹಾಗಾದರೆ ಮಾತ್ರ ನಾಡು ಸಮೃದ್ಧವಾಗಿ ಕಾಲಕಾಲಕ್ಕೆ ಮಳೆ, ಬಿಸಿಲು ಸರಿಯಾಗಿ ದೊರಕಿ, ಪರಿಸರ ಮಾಲಿನ್ಯ ನಿವಾರಣೆಯಾಗಿ ಹಾಗೂ ಪರಿಸರ ನಾಶವಾಗುವುದು ತಪ್ಪಿ ಹೋಗಿ ಸುದೃಢ, ಸುಭೀಕ್ಷ ನಾಡು ನಿರ್ಮಾಣವಾಗಬಹುದು ಎಂದು ದ.ಕ. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ನುಡಿದರು.
ಶುಕ್ರವಾರದಂದು ಮೂಲ್ಕಿಯ ಗೃಹರಕ್ಷಕ ದಳ ಕಛೇರಿ ಆವರಣದಲ್ಲಿ ಗಿಡ ನೆಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮೂಲ್ಕಿ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ಲೋಕೇಶ್ ಹಾಗೂ ಗೃಹರಕ್ಷಕ ಗೃಹರಕ್ಷಕಿಯರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ