ಜೈವಿಕ ಸರಪಳಿಯನ್ನು ಸಂರಕ್ಷಿಸೋಣ: ಡಾ. ಚೂಂತಾರು

Upayuktha
0

                        ಮೂಲ್ಕಿ ಗೃಹರಕ್ಷಕರಿಂದ ವನಮಹೋತ್ಸವ


ಬೆಂಗಳೂರು:
ನಿರಂತರವಾಗಿ ಪರಿಸರದ ಮೇಲೆ ಉಂಟಾಗುತ್ತಿರುವ ದೌರ್ಜನ್ಯದಿಂದಾಗಿ ಪರಿಸರದಲ್ಲಿ  ಬದುಕು ಕಟ್ಟಿಕೊಂಡಿರುವ ಜೀವ ಸಂಕುಲಗಳು ನಾಶವಾಗಿ, ಪರಿಸರದ ಸಮತೋಲನ ತಪ್ಪಿ ಹೋಗುತ್ತಿದೆ. ಜೈವಿಕ  ಸರಪಳಿ ನಾಶವಾಗಿ ಹಲವಾರು ವಿರಳ ಗಿಡಸಸ್ಯಗಳು ಮತ್ತು ಪ್ರಾಣಿ ಸಂಕುಲಗಳು ನಾಶವಾಗಿ ಹೋಗುತ್ತಿದೆ. 


ಈ ನಿಟ್ಟಿನಲ್ಲಿ ನಾವೆಲ್ಲಾ ಕೂಡಲೇ ಎಚ್ಚೆತ್ತುಕೊಂಡು ಗಿಡಗಳನ್ನು ನೆಟ್ಟು ಮರಗಳನ್ನು ಪೋಷಿಸಿ ಪರಿಸರವನ್ನು ರಕ್ಷಿಸಬೇಕು. ಹಾಗಾದರೆ ಮಾತ್ರ  ನಾಡು ಸಮೃದ್ಧವಾಗಿ ಕಾಲಕಾಲಕ್ಕೆ  ಮಳೆ, ಬಿಸಿಲು ಸರಿಯಾಗಿ ದೊರಕಿ,  ಪರಿಸರ ಮಾಲಿನ್ಯ ನಿವಾರಣೆಯಾಗಿ ಹಾಗೂ ಪರಿಸರ ನಾಶವಾಗುವುದು ತಪ್ಪಿ ಹೋಗಿ ಸುದೃಢ, ಸುಭೀಕ್ಷ ನಾಡು  ನಿರ್ಮಾಣವಾಗಬಹುದು ಎಂದು ದ.ಕ. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ನುಡಿದರು. 


ಶುಕ್ರವಾರದಂದು  ಮೂಲ್ಕಿಯ ಗೃಹರಕ್ಷಕ ದಳ ಕಛೇರಿ ಆವರಣದಲ್ಲಿ ಗಿಡ ನೆಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮೂಲ್ಕಿ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ಲೋಕೇಶ್ ಹಾಗೂ ಗೃಹರಕ್ಷಕ ಗೃಹರಕ್ಷಕಿಯರು  ಉಪಸ್ಥಿತರಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top