ನಿಟ್ಟೆ: "ನಮ್ಮ ಇಂದಿನ ಉತ್ತಮ ಬದುಕಿಗೆ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವೇ ಕಾರಣವೆಂಬುದನ್ನು ನಾವು ಎಂದಿಗೂ ಮರೆಯಬಾರದು. ಅದರಂತೆಯೇ, ಪ್ರಸ್ತುತ ದಿನಗಳಲ್ಲಿ ಪ್ರತಿನಿತ್ಯದ ನೆಮ್ಮದಿಯ ಬದುಕಿಗೆ ದೇಶದ ಗಡಿ ಕಾಯುವ ಯೋಧರ ತ್ಯಾಗಬಲಿದಾನವೂ ಸ್ಮರಣೀಯವಾದುದು. ಜಾಗತಿಕ ಮಟ್ಟದಲ್ಲಿ ಭಾರತವನ್ನು ವಿಶ್ವಗುರುವಾಗಿಸುವ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕು" ಎಂದು ನಿಟ್ಟೆ ಜಸ್ಟೀಸ್ ಕೆ.ಎಸ್.ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನ ಮಾಜಿ ನಿರ್ದೇಶಕ ಪ್ರೊ.ಡಾ.ಕೆ. ಶಂಕರನ್ ಅಭಿಪ್ರಾಯಪಟ್ಟರು.
ಅವರು ಆಗಸ್ಟ್.15 ರಂದು ನಿಟ್ಟೆ ಕ್ಯಾಂಪಸ್‌ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಿಟ್ಟೆ ತಾಂತ್ರಿಕ ಕಾಲೇಜಿನ ಕೆ.ಎ.ಆರ್ ನೇವಲ್ ಎನ್.ಸಿ.ಸಿ ಘಟಕದ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು. ಡಾ. ಎನ್.ಎಸ್.ಎ.ಎಂ ಶಾಲೆಯ ಸ್ಕೌಟ್-ಗೈಡ್ಸ್, ಎನ್.ಸಿ.ಸಿ ಎನ್.ಸಿ.ಸಿ ಕೆಡೆಟ್ ಗಳು, ಕಾಲೇಜಿನ ಸುರಕ್ಷತಾ ಸಿಬ್ಬಂದಿವರ್ಗ, ಪ್ರಾಧ್ಯಾಪಕರು, ಬೊಧಕೇತರ ವರ್ಗ, ವಿದ್ಯಾರ್ಥಿಗಳು, ಭಾಗವಹಿಸಿದ್ದರು. ಡಾ.ಎನ್.ಎಸ್.ಎ.ಎಂ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿಗೀತೆ ಗಾಯನ ನಡೆಯಿತು.
ವೇದಿಕೆಯಲ್ಲಿ ನಿಟ್ಟೆ ಸಮೂಹ ವಿದ್ಯಾಸಂಸ್ಥೆಗಳ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ವಿವಿಧ ವಿಭಾಗ ಮುಖ್ಯಸ್ಥರು ಉಪಸ್ಥಿತರಿದ್ದರು.
ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್ ನ ಕ್ಯಾಂಪಸ್ ಮೈಟೆನೆನ್ಸ್ & ಡೆವಲಪ್ಮೆಂಟ್ ವಿಭಾಗದ ನಿರ್ದೇಶಕ ಎ.ಯೋಗೀಶ್ ಹೆಗ್ಡೆ ಸ್ವಾಗತಿಸಿದರು. ಭೌತಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಡಾ. ರಾಘವೇಂದ್ರ ಬಾಯರಿ ವಂದಿಸಿದರು. ನಿಟ್ಟೆ ತಾಂತ್ರಿಕ ಕಾಲೇಜಿನ ಎನ್.ಸಿ.ಸಿ ಘಟಕದ ಉಸ್ತುವಾರಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ