ರಾಜ್ಯಶಾಸ್ತ್ರ ಶಿಕ್ಷಕರ ಸಂಘದಿಂದ ಕುಲಪತಿಗೆ ಅಭಿನಂದನೆ

Upayuktha
0


ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಶಿಕ್ಷಕರ ಸಂಘದ  ವತಿಯಿಂದ ವಿಶ್ವವಿದ್ಯಾನಿಯದ ಕುಲಪತಿ ಪ್ರೊ. ಜಯರಾಜ್ ಅಮೀನ್ ಅವರನ್ನು ಬುಧವಾರ, ಬಂಟ್ಸ್ ಹಾಸ್ಟೆಲ್‌ನ ರಾಮಕೃಷ್ಣ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು. 


ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಮಂಗಳೂರು ವಿ.ವಿ ರಾಜ್ಯಶಾಸ್ತ್ರ ಶಿಕ್ಷಕರ ಸಂಘಕ್ಕೆ ಕ್ರತಜ್ಞತೆ ತಿಳಿಸುವುದರ ಜೊತೆಗೆ, ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಸಹಕರಿಸುತ್ತಿರುವ ಮಂಗಳೂರು ವಿ.ವಿ. ವ್ಯಾಪ್ತಿಯ ಕಾಲೇಜುಗಳಿಗೆ ಧನ್ಯವಾದ ಸಲ್ಲಿಸಿದರು.


ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಶಿಕ್ಷಕರ ಸಂಘದ ಅಧ್ಯಕ್ಷೆ ಡಾ. ಶಾನಿ ಕೆ ಆರ್, ಶ್ರೀ ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಹಾವೀರ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪ್ರವೀಣ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.


ರಾಜ್ಯಶಾಸ್ತ್ರ ಶಿಕ್ಷಕರ ಸಂಘದ ಸದಸ್ಯರು, ಬೋಧಕ ವೃಂದದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top