ಚಂದ್ರಯಾನ 3 ಯಶಸ್ವಿ ಹಿನ್ನೆಲೆ: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಂಭ್ರಮಾಚರಣೆ

Upayuktha
0

 


ಪುತ್ತೂರು: ಭಾರತದ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಅತ್ಯಂತ ಯಶಸ್ವಿಯಾಗಿ ಇಳಿದಾಗ ಇಡೀ ಜಗತ್ತೇ ರೋಮಾಂಚನ ಗೊಂಡಿತ್ತು. ದೇಶದಾದ್ಯಂತ ಸಂಭ್ರಮ ಮನೆ ಮಾಡಿತ್ತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಕೂಡ ವಿದ್ಯಾರ್ಥಿಗಳಿಂದ ಸಂಭ್ರಮಾಚರಣೆ ಮಾಡಲಾಯಿತು.


ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಸ್ಪರ್ಶ ಮಾಡಿದ ಸನ್ನಿವೇಶದ ಕುರಿತು ಮತ್ತು ಅದರ ಮಹತ್ವವನ್ನು  ಕಾಲೇಜಿನ ಉಪನ್ಯಾಸಕ ಹರೀಶ ಶಾಸ್ತ್ರೀ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಡಾ. ಕೆ. ಎನ್ ಸುಬ್ರಹ್ಮಣ್ಯ, ಪ್ರಾಂಶುಪಾಲರು, ಪ್ರಾಧ್ಯಾಪಕರು ಮತ್ತು ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು. ಬಳಿಕ ಸಿಹಿ ತಿಂಡಿ ವಿತರಿಸಲಾಯಿತು.  ಉಪನ್ಯಾಸಕಿ ದಯಾಮಣಿ ಕಾರ್ಯಕ್ರಮವನ್ನು ನಿರ್ವಹಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top