ಚೆಸ್ ಪಂದ್ಯಾಟವು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವವನ್ನು ಮೂಡಿಸಲು ಸಹಾಯ : ಶೇಷಪ್ಪ ಗೌಡ

Upayuktha
0

 ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ವಿವೇಕಾನಂದ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಬಾಲಕ ಮತ್ತು ಬಾಲಕಿಯರ ಚೆಸ್ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ನೇತಾಜಿ ಸಭಾ ಭವನದಲ್ಲಿ ನಡೆಯಿತು. ವಿಟ್ಲ ಸರಕಾರಿ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶೇಷಪ್ಪ ಗೌಡ ಮಾತನಾಡಿ ಚದುರಂಗ ಅದೃಷ್ಟವನ್ನು ಅವಲಂಬಿಸಿದ ಆಟವಲ್ಲ. ಶುದ್ಧವಾಗಿ ಆಟಗಾರರ ಆಲೋಚನೆ, ಯೋಜನಾ ಸಾಮಥ್ರ್ಯ ಮತ್ತು ಮುಂದಾಲೋಚನೆಗಳನ್ನು ಅವಲಂಬಿಸಿದ ಆಟ. ಸ್ಪರ್ಧಾತ್ಮಕ ಯುಗದಲ್ಲಿ ಇಂತಹ ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವವನ್ನು ಮೂಡಿಸಲು ಸಹಾಯ ಮಾಡುತ್ತದೆ. ಶಾಲಾ ಕಾಲೇಜು ಮಟ್ಟದ ಕ್ರೀಡಾ ಕೂಟಗಳಿಂದ ಸ್ನೇಹ ಸೌಹಾರ್ದತೆಗಳು ಏರ್ಪಡುತ್ತವೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಆಡಳಿತ ಮಂಡಳಿಯ ಸದಸ್ಯ ಡಾ. ಕೃಷ್ಣಪ್ರಸನ್ನ  ವಹಿಸಿ ರಾಷ್ಟ್ರೀಯ ಕ್ರೀಡಾ ದಿನದ ಹಿನ್ನೆಲೆ ಮತ್ತು ಚೆಸ್ ಪಂದ್ಯಾಟದ ಮಹತ್ವನ್ನು ತಿಳಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ ಸ್ಫರ್ಧೆಯಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಕಾರ್ಯಕ್ರಮವನ್ನು ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕಿ ಡಾ. ಜ್ಯೋತಿ ಸ್ವಾಗತಿಸಿ ಯತೀಶ್ ವಂದಿಸಿದರು.


ಜಿಲ್ಲೆಯ ಸುಮಾರು ಹತ್ತೊಂಭತ್ತು ಕಾಲೇಜುಗಳ ತಂಡವು ಸ್ಫರ್ಧೆಯಲ್ಲಿ ಭಾಗವಹಿಸಿದ್ದವು. ಬಾಲಕರ ವಿಭಾಗದಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು ಪ್ರಥಮ ಸ್ಥಾನ ಮತ್ತು ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಗಳಿಸಿದೆ. ಬಾಲಕಿಯರ ವಿಭಾಗದಲ್ಲಿ ಉಜಿರೆಯ ಎಸ್.ಡಿ.ಎಂ  ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನ ಮತ್ತು ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಗಳಿಸಿದೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top