ಅವನಿ ಎಸ್ ನಾಯಕ್ ರಾಜ್ಯ ಮಟ್ಟ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ
ಪುತ್ತೂರು: ಪುತ್ತೂರಿನ ಶ್ರೀ ರಾಮ ವಿದ್ಯಾಸಂಸ್ಥೆ ಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದಿದೆ. ತಂಡದಲ್ಲಿ ವಿದ್ಯಾರ್ಥಿನಿಯರಾದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅವನಿ ಎಸ್ ನಾಯಕ್, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಮನ್ಯ ಅಂಬೆಕಲ್ಲು, ತೃಪ್ತಿ ಜಿ ಆರ್, ಭೂಮಿಕಾ, ರಕ್ಷಿತಾ ಭಾಗವಹಿಸಿದ್ದರು.
ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅವನಿ ಎಸ್ ನಾಯಕ್ ಚದುರಂಗ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಈ ಮೂಲಕ ಆಗಸ್ಟ್ 12 ರಂದು ಶ್ರೀರಾಮ ವಿದ್ಯಾ ಸಂಸ್ಥೆ ಕಲ್ಲಡ್ಕ ದಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ, ಯತೀಶ್ ಬಾರ್ತಿಕುಮೆರ್ ಹಾಗೂ ಕಾರ್ತಿಕ್ ಎನ್ ಇವರ ಮಾರ್ಗದರ್ಶನದಲ್ಲಿ ಈ ತಂಡವು ತರಬೇತಿಯನ್ನು ಪಡೆದಿರುತ್ತದೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ