ವಿವೇಕಾನಂದ ಪದವಿ ಕಾಲೇಜಿನ ಪರೀಕ್ಷಾಂಗ ಕುಲಸಚಿವರಾಗಿ ಡಾ.ಶ್ರೀಧರ ಎಚ್.ಜಿ ಮುಂದುವರಿಕೆ

Upayuktha
0

ಪುತ್ತೂರು: ಇಲ್ಲಿನ ವಿವೇಕಾನಂದ ಪದವಿ ಕಾಲೇಜು ಸ್ವಾಯತ್ತ ಪಡೆದ ಹಿನ್ನೆಲೆಯಲ್ಲಿ ಪರೀಕ್ಷಾಂಗ ಕುಲಸಚಿವರಾಗಿ ಕನ್ನಡ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಶ್ರೀಧರ ಎಚ್.ಜಿ ಅವರು ತಮ್ಮ ಸೇವೆಯನ್ನು ಮುಂದುವರೆಸಲಿದ್ದಾರೆಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.


ಸುಮಾರು ಮೂವತ್ತಾರು ವರ್ಷಗಳ ಕಾಲ ಡಾ.ಶ್ರೀಧರ ಎಚ್.ಜಿಕನ್ನಡ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಕಳೆದ ಜುಲೈ 31 ರಂದುಅಧ್ಯಾಪನಾ  ವೃತ್ತಿಯಿಂದ ನಿವೃತ್ತಿಗೊಂಡಿದ್ದಾರೆ. ಈ ಸಂದರ್ಭದಲ್ಲಿ ಉಪನ್ಯಾಸದ ಜೊತೆಗೆ ಇವರು ಕಾಲೇಜಿನ ಪರೀಕ್ಷಾಂಗ ಕುಲಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.ಆದರೆ ಈಗ ನಿವೃತ್ತಿಯ ಬಳಿಕವೂ ಕಾಲೇಜಿನ ಆಡಳಿತ ಮಂಡಳಿಯ ಆದೇಶದ ಮೇರೆಗೆ ಇವರು ಪರೀಕ್ಷಾಂಗ ಕುಲಸಚಿವರಾಗಿ ತಮ್ಮ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. 


ಕಾಲೇಜಿನ ಐಕ್ಯೂಎಸಿ ಸಂಯೋಜಕರಾಗಿ ಕೆಲಸವನ್ನು ನಿರ್ವಹಿಸಿದ ಇವರು ನ್ಯಾಕ್ ಸಮಿತಿಯ ಮೂರನೆಯ ಭೇಟಿಯಲ್ಲಿ ಕಾಲೇಜಿಗೆ ‘ಎ’ ಗ್ರೇಡ್ ಬರುವಲ್ಲಿ ವಿಶೇಷವಾಗಿ ಶ್ರಮಿಸಿದ್ದಾರೆ.


ಮೂಲತಃ ಸಾಗರದ ಮುಂಡಿಗೆಹಳ್ಳದವರಾಗಿದ್ದು ಸಾಹಿತ್ಯಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ವಿಮರ್ಶಕನಾಗಿ, ನಾಟಕಗಾರನಾಗಿ, ಕಾದಂಬರಿಕಾರನಾಗಿ ಅನೇಕ ಕೃತಿಗಳನ್ನು ಸಮಾಜಕ್ಕೆ ನೀಡಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
To Top