ಪುತ್ತೂರು: ಚೆನ್ನೈಯಲ್ಲಿ ನಡೆದ ಪ್ರಥಮ ಸೌತ್ ಇಂಡಿಯಾ ಕರಾಟೆ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ಅರುಣ್ ಕುಮಾರ್ ಎಂ. ಆರ್ ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಈತನು ಪುತ್ತೂರಿನ ಅಮ್ಚಿನಡ್ಕದ ಮಾಡ್ನೂರು ಗ್ರಾಮದ ರಮೇಶ್ ಎ ಎಂ ಮತ್ತು ಲಲಿತಾ ದಂಪತಿ ಪುತ್ರ. ಈತನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ