ಸಂಪನ್ಮೂಲ ವ್ಯಕಿಯಾಗಿ ಭಾಗವಹಿಸಿದ ಪುತ್ತೂರು ಅಂಚೆ ವಿಭಾಗದ ಮಾರ್ಕೆಟಿಂಗ್ ಕಾರ್ಯನಿರ್ವಾಹಕ ಗುರುಪ್ರಸಾದ್ ಕೆ ಎಸ್ ಮಾತನಾಡಿ ಅಂಚೆ ಕಚೇರಿಯಲ್ಲಿ ಸಿಗುವ ಬ್ಯಾಂಕ್ ಸೇವೆಗಳು, ಅಂಚೆ ವಿಮೆ, ಆಕ್ಸಿಡೆಂಟ್ ಪರಿಹಾರ ವಿಮೆ, ವಿವಿಧ ಪೆನ್ಷನ್ ಫಂಡ್ ಹಾಗೂ ಅಂಚೆ ವಿಭಾಗದಲ್ಲಿ ಇರುವ ವಿವಿಧ ಉದ್ಯೋಗದ ಅವಕಾಶಗಳ ಬಗ್ಗೆ ಬೆಳಕು ಚೆಲ್ಲಿದರು. ಪೋಸ್ಟಲ್ ಆರ್ಡರ್, ವಿವಿಧ ಉಳಿತಾಯ ಯೋಜನೆ ಸೇರಿದಂತೆ ಒಟ್ಟಾರೆ ಅಂಚೆ ಕಚೇರಿಯಲ್ಲಿ ಸಾರ್ವಜನಿಕರಿಗೆ ಒದಗಿಸುವ ಸೇವೆಗಳ ಕುರಿತು ಮಾಹಿತಿ ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯೆ ವತ್ಸಲಾ ರಾಜ್ಞಿ ಮಕ್ಕಳಿಗೆ ಶುಭ ಹಾರೈಸಿದರು. ಪ್ರಾಂಶುಪಾಲ ಮಹೇಶ್ ನಿಟಿಲಾಪುರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಧರ್ ವಿ ಶೆಟ್ಟಿಗಾರ್, ಉಷಾ ಎ ಎಂ, ಗ್ರೀಷ್ಮ ಕೆ ಎಸ್ ಹಾಗೂ ದೇವಿಪ್ರಸಾದ್ ಕಾರ್ಯಕ್ರಮದಲ್ಲಿ ಹಾಜರಿದ್ದರು.
ವಿದ್ಯಾರ್ಥಿನಿಯರಾದ ಶ್ರುತಿ ಭಟ್ ಮತ್ತು ಅನುಷಾ ಪ್ರಾರ್ಥಿಸಿದರು. ವಿದ್ಯಾರ್ಥಿನಿ ಸುಶ್ಮಿತಾ ಸ್ವಾಗತಿಸಿ, ಚಿತ್ರಾಶ್ರೀ ವಂದಿಸಿದರು. ದ್ವಿತೀಯ ವಾಣಿಜ್ಯ ವಿಭಾಗದ ಸಂಸ್ಕೃತಿ ಜೈನ್ ಕಾರ್ಯಕ್ರಮವನ್ನು ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ