ವಿದ್ಯಾಭಾರತಿ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ವಿವೇಕಾನಂದ ಪ.ಪೂ ಕಾಲೇಜ್‌ ಸಾಧನೆ

Upayuktha
0

ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ಪ್ರಥಮ ಮತ್ತು ಬಾಲಕಿಯರ ತಂಡ ದ್ವಿತೀಯ

ಪುತ್ತೂರು: ಕಲ್ಲಡ್ಕದ ಶ್ರೀರಾಮ ವಿದ್ಯಾಸಂಸ್ಥೆಯವರು ಪುತ್ತೂರಿನ ಆಫೀಸರ್ ಕ್ಲಬ್‍ನಲ್ಲಿ ನಡೆಸಿದ ವಿದ್ಯಾಭಾರತಿ ಜಿಲ್ಲಾ ಹಾಗೂ ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ  ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಹೈದರಾಬಾದ್‍ನಲ್ಲಿ ನಡೆಯುವ ಕ್ಷೇತ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ ಹಾಗೂ  ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ.



ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಅಖಿಲೇಶ್ ವರ್ಮ, ವಿಘ್ನೇಶ್ ಜಾಧವ್, ಕೌಶಿಕ್ ಯು, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಯಶಸ್ ಭಾಗವಹಿಸಿದ್ದರು. ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಪುಣ್ಯ, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಹರ್ಷಿತಾ, ವಿಜ್ಞಾನ ವಿಭಾಗದ ಶ್ರೇಯಾ ರಾವ್,ಅಂಶಿ ಎ ಶೆಟ್ಟಿ ಭಾಗವಹಿಸಿದ್ದರು. ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ. 


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top