ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ- ಇಂದು ಪದವಿ ಪ್ರದಾನ

Upayuktha
0

 


ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರಧಾನ ಕಾರ್ಯಕ್ರಮ ಸಮಾವರ್ತನ ಸಮಾರಂಭವು ಆಗಸ್ಟ್ 26 ಶನಿವಾರದಂದು ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ. 2022-23ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ.


ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದಲ್ಲಿ 4ನೇ ರ್ಯಾಂಕ್ ಗಳಿಸಿರುವ ಜಾಗೃತಿ.ಜೆ.ನಾಯಕ್ ಹಾಗೂ ಏಳನೇ ರ್ಯಾಂಕ್ ಗಳಿಸಿರುವ ದಿವ್ಯಶ್ರೀ.ಎಸ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.


ಪ್ರತಿ ವಿಭಾಗದಲ್ಲಿ ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಕಾರ್ಯಕ್ರಮವೂ ನಡೆಯುತ್ತದೆ. 


ಅಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಈ ಸಮಾರಂಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಹಾಗೂ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ.ಜಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ನಿರ್ದೇಶಕರು, ಪ್ರಾಂಶುಪಾಲರು ಮತ್ತು ವಿಭಾಗ ಮುಖ್ಯಸ್ಥರು ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ ಕೆ. ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top