ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ ಕಾಲೇಜಿನ ಆಗುಹೋಗುಗಳ ಬಗ್ಗೆ ಪೋಷಕರು ಗಮನವನ್ನು ಹರಿಸಬೇಕು : ಮುರಳೀಧರ ಭಟ್

Upayuktha
0

ಪುತ್ತೂರು: ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ ಮತ್ತು ಕಾಲೇಜಿನ ಆಗುಹೋಗುಗಳ ಬಗೆಗೆ ಹೆತ್ತವರು ಮತ್ತು ಪೋಷಕರು ಸೂಕ್ತ ಗಮನವನ್ನು ಹರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಕೋಶಾಧಿಕಾರಿ ಮುರಳೀಧರ ಭಟ್ ಬಂಗಾರಡ್ಕ ಹೇಳಿದರು.


ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ವಿಭಾಗ ಮತ್ತು ಪೇರೆಂಟ್ ರಿಲೇಶನ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಹೆತ್ತವರ ಮತು ಪೋಷಕರ ಸಮಾಲೋಚನ ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದರು. ಕಾಲೇಜಿನ ಚಟುವಟಿಕೆಗಳ ಬಗ್ಗೆ ಉಪನ್ಯಾಸಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳನ್ನು ಗಮನಿಸುತ್ತಾರೆ, ಆದರೆ ಮನೆಯಲ್ಲಿ ನೀವು ಅವರನ್ನು ಸೂಕ್ಷ್ಮವಾಗಿ ಗಮನಿಸುವ ಆವಶ್ಯಕತೆ ಇದೆ ಎಂದು ಹೇಳಿದರು. ಸಾಮಾಜಿಕ ಜಾಲತಾಣಗಳ ಬಳಕೆ, ವಾಹನಗಳ ಬಳಕೆಯ ಬಗ್ಗೆ ಮಕ್ಕಳಿಗೆ ಎಚ್ಚರಿಕೆಯನ್ನು ನೀಡಬೇಕು ಮತ್ತು ಅವುಗಳನ್ನು ಮಿತವಾಗಿ ಹಾಗೂ ಜಾಗ್ರತೆಯಾಗಿ ಬಳಸುವಂತೆ ಮನವರಿಕೆ ಮಾಡಬೇಕು ಎಂದು ನುಡಿದರು. ವಿದ್ಯಾರ್ಥಿಗಳ ಪ್ರಗತಿಯನ್ನು ಗಮನಿಸಿವುದಕ್ಕೆ ಆಗಾಗ ಕಾಲೇಜಿಗೆ ಭೇಟಿ ನೀಡಿ ವಿಭಾಗ ಮುಖ್ಯಸ್ಥರೊಂದಿಗೆ ಮತ್ತು ಪ್ರಾಧ್ಯಾಪಕರೊಂದಿಗೆ ಮಾತುಕತೆ ನಡೆಸಬೇಕು ಎಂದರು.


ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಮಾತನಾಡಿ 2022ರ ಶೈಕ್ಷಣಿಕ ಪದ್ದತಿಯ ಪ್ರಕಾರ ವಿದ್ಯಾರ್ಥಿಗಳ ಹಾಜರಾತಿ, ಆಂತರಿಕ ಮೌಲ್ಯಮಾಪನ, ಅಂಕಗಳು ಹಾಗೂ ಇನ್ನಿತರ ಮಹತ್ವದ ಮಾಹಿತಿಗಳನ್ನು ನೀಡಿದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾಲೇಜು ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂದರ್ಭದಲ್ಲಿ ಹೆತ್ತವರ ಮತ್ತು ಪೋಷಕರ ಸಹಕಾರ ಅಗತ್ಯ ಎಂದು ಹೇಳಿದರು.


ವಿದ್ಯಾರ್ಥಿಗಳ ಹೆತ್ತವರು ಮತ್ತು ಪೋಷಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು ಮತ್ತು ತಮಗಿದ್ದ ಸಂಶಯಗಳನ್ನು ನಿವಾರಿಸಿಕೊಂಡರು. ಸಭಾ ಕಾರ್ಯಕ್ರಮದ ಬಳಿಕ ತಮ್ಮ ಮಕ್ಕಳಿಗೆ ಕಲಿಸುವ ಎಲ್ಲಾ ಪ್ರಾಧ್ಯಾಪಕರ ಜತೆ ಪೋಷಕರು ಸಂವಹನವನ್ನು ನಡೆಸಿದರು.


ಶೈಕ್ಷಣಿಕವಾಗಿ ಉತ್ತಮ ಸಾಧನೆಯನ್ನು ಮಾಡಿದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.


ಪೇರೆಂಟ್ ರಿಲೇಶನ್ ಸೆಲ್‍ನ ಸಂಯೋಜಕಿ ಪ್ರೊ.ಶ್ರೀಶರಣ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಮೂಲ ವಿಜ್ಞಾನ ವಿಭಾಗ ಮುಖ್ಯಸ್ಥ ಪ್ರೊ.ರಮಾನಂದ ಕಾಮತ್ ಸ್ವಾಗತಿಸಿ ಪ್ರಸ್ತಾವನೆಗೈದರು. ಪೇರೆಂಟ್ ರಿಲೇಶನ್ ಸೆಲ್‍ನ ಪ್ರಧಾನ ಸಂಯೋಜಕಿ ಡಾ.ಶ್ವೇತಾಂಬಿಕಾ.ಪಿ ವಂದನಾರ್ಪಣೆಗೈದರು. ಪ್ರೊ.ತೇಜಸ್ವಿನಿ.ಎಲ್.ಪಿ ಹಾಗೂ ಪ್ರೊ.ಸೌಜನ್ಯ.ಎಂ.ಎಂ ಕಾರ್ಯಕ್ರಮ ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top