ವಿವೇಕಾನಂದ ಪ.ಪೂ ಕಾಲೇಜಿನ ಬಾಲಕಿಯರ ತಂಡ ವಿದ್ಯಾಭಾರತಿ ಕ್ಷೇತ್ರ ಮಟ್ಟದ ಕಬಡ್ಡಿ ಸ್ಪರ್ಧೆಗೆ ಆಯ್ಕೆ

Upayuktha
0

ಪುತ್ತೂರು: ಮಂಗಳೂರಿನ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದು ಹೈದರಾಬಾದ್‍ನಲ್ಲಿ ನಡೆಯಲಿರುವ ಕ್ಷೇತ್ರ ಮಟ್ಟದ ಕಬಡ್ಡಿ ಸ್ಪರ್ಧೆಗೆ ಆಯ್ಕೆಯಾಗಿದೆ.  ತಂಡದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಮನ್ಯ ಎಂ ವಿ, ಅನ್ನಪೂರ್ಣ ರೈ, ವಾಣಿಜ್ಯ ವಿಭಾಗದ ಹೇಮಲತಾ ಕೆ, ವರ್ಷಿತಾ ಎಚ್ ವಿ, ತ್ರಿಷಾ, ಕಾರ್ತಿಕಾ, ಪ್ರಣತಿ,ಹರ್ಷಿತಾ ವಿ ವಿ, ಕಲಾ ವಿಭಾಗದ ಧನುಶ್ರೀ, ಭೂಮಿಕಾ,ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದರಕ್ಷಾ ಮತ್ತು ದೀಪ್ತಿ ಭಾಗವಹಿಸಿದ್ದರು.


ಈ ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್  ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top