ಪುತ್ತೂರು: ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ 1981 ರಿಂದ 1986 ರವರೆಗೆ ಅಧ್ಯಯನ ಮಾಡಿದ ಹಿರಿಯ ವಿದ್ಯಾರ್ಥಿಗಳು ವಿವೇಕಾನಂದ ಕಾಲೇಜಿಗೆ ಒಂದು ಲಕ್ಷದ ಐವತ್ತೊಂದು ಸಾವಿರ ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ.
ಪ್ರಸ್ತುತ ಪದವಿ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿರುವ ಹಿಂದುಳಿದ ವಿದ್ಯಾರ್ಥಿಗಳಿಗೆ ಸೌಲಭ್ಯವನ್ನು ನೀಡುವ ಉದ್ದೇಶದಿಂದ ಸಂಗ್ರಹಿಸಿದ ಹಣವನ್ನು ದೇಣಿಗೆ ರೂಪದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹಾಗೂ ಸಂಚಾಲಕ ಮುರಳಿಕೃಷ್ಣ ಕೆ.ಎನ್ ಅವರಿಗೆ ಹಸ್ತಾಂತರಿಸಲಾಯಿತು.
ದೇಣಿಗೆಯ ನೇತೃತ್ವವನ್ನು ಹಿರಿಯ ವಿದ್ಯಾರ್ಥಿಗಳಾದ ಬೋಪಣ್ಣ, ಮಹೇಶ್ ಕುಮಾರ್, ನವೀನ್ ರೈ ಮೈಸೂರು, ಹೆಚ್ ಎಂ ರಮೇಶ್, ಹೆಚ್.ಸಿ ತಿಮ್ಮಯ್ಯ, ಮಧುಸೂಧನ್, ಹಾಗೂ ವೈ.ಟಿ ಶೇಷಗಿರಿ ವಹಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಹಾಗೂ ಪರೀಕ್ಷಾಂಗ ಕುಲಸಚಿವ ಡಾ.ಶ್ರೀಧರ ಎಚ್.ಜಿ, ಕಾಲೇಜಿನ ವಿಶೇಷಾಧಿಕಾರಿ ಡಾ.ಶ್ರೀಧರ ನಾಯಕ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ