ವಿದ್ಯಾಭಾರತಿ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡಕ್ಕೆ ದ್ವಿತೀಯ ಸ್ಥಾನ

Upayuktha
0

ಪುತ್ತೂರು: ಬೆಳಗಾವಿಯ ಸಂತ ಮೀರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ  ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ. ತಂಡದಲ್ಲಿ  ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಧನುಷ್ ಆರ್, ಲಿಖಿತ್ ಗೌಡ ಕೆ, ವಾಣಿಜ್ಯ ವಿಭಾಗದ ನಿರ್ಮಿತ್ ,ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿನಯ್ ಡಿ, ವಿಜ್ಞಾನ ವಿಭಾಗದ ಮೋನಿಷ್ ಭಾಗವಹಿಸಿದ್ದರು. ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿನಯ್ ಡಿ ಆರ್ಟಿಸ್ಟಿಕ್‍ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.


ಈ ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್  ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

إرسال تعليق

0 تعليقات
إرسال تعليق (0)
To Top