ವಿವೇಕಾನಂದ ಪ.ಪೂ ಕಾಲೇಜಿನ ಅವನಿ ಎಸ್ ನಾಯಕ್ ವಿದ್ಯಾಭಾರತಿ ಕ್ಷೇತ್ರ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ

Upayuktha
0


ಪುತ್ತೂರು:
ಕಲ್ಲಡ್ಕದ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅವನಿ ಎಸ್ ನಾಯಕ್ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನವನ್ನು ಪಡೆದು  ಹೈದರಾಬಾದ್‍ನಲ್ಲಿ  ನಡೆಯಲಿರುವ ಕ್ಷೇತ್ರ ಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. 


ಈಕೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸುಮರವರ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
Advt Slider:
To Top