ವಿದ್ಯಾಭಾರತಿ ಜಿಲ್ಲಾ ಮಟ್ಟದ ಕರಾಟೆ: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ, ಬಾಲಕಿಯರ ತಂಡ ಪ್ರಥಮ

Upayuktha
0

ಪುತ್ತೂರು: ಪುಣಚದ ಶ್ರೀದೇವಿ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಪಡೆದಿದೆ. ಬಾಲಕರ ವಿಭಾಗದಲ್ಲಿ  ದ್ವಿತೀಯ  ಪಿಯುಸಿ ವಿಜ್ಞಾನ ವಿಭಾಗದ ಪ್ರಣವ್ ಎ, ಚೇತನ್, ವಿನೀಶ್ ಕುಮಾರ್, ವಾಣಿಜ್ಯ ವಿಭಾಗದ ಪವನ್, ಕಲಾ ವಿಭಾಗದ ಅರುಣ್ ಕುಮಾರ್, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅದ್ವಿತ್ ಶರ್ಮ, ಶಮಂತ್ ಬಿ. ಎಲ್, ಅಶೀಶ್ ಕೆ, ದುರ್ಗೇಶ್, ವಾಣಿಜ್ಯ ವಿಭಾಗದ ಲಿಖಿತ್ ಭಾಗವಹಿಸಿದ್ದರು.


ಬಾಲಕಿಯರ ವಿಭಾಗದಲ್ಲಿ ದ್ವಿತೀಯ  ಪಿಯುಸಿ ವಿಜ್ಞಾನ ವಿಭಾಗದ ಸಹನಾ ಭಟ್, ವಾಣಿಜ್ಯ ವಿಭಾಗದ ಪ್ರಪ್ತಿ ಕೆ. ಎಸ್, ಪುಣ್ಯ ಆರ್ ಎನ್, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಪ್ರಣಮ್ಯ ಪಿ ರಾವ್, ಕಲಾ ವಿಭಾಗದ  ತೃಪ್ತಿ ಎ ಕೆ ಭಾಗವಹಿಸಿದ್ದರು. ಈ ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್  ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top