ವಿವಿ ಕಾಲೇಜಿನಲ್ಲಿ ಸಂಶೋಧನಾ ವಿಧಾನಗಳ ಕುರಿತ ಒಂದು ದಿನದ ಕಾರ್ಯಾಗಾರ
ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಮತ್ತು ಸ್ನಾತಕೋತ್ತರ ವಾಣಿಜ್ಯ ವಿಭಾಗದ ಹಳೆ ವಿದ್ಯಾರ್ಥಿಗಳ ಸಂಘದ ಜಂಟಿ ಸಹಯೋಗದಲ್ಲಿ ಸಂಶೋಧನಾ ವಿಧಾನಗಳ ಕುರಿತ ಒಂದು ದಿನದ ಕಾರ್ಯಾಗಾರವನ್ನು ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಬುಧವಾರ ಆಯೋಜಿಸಲಾಗಿತ್ತು.
ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥ ಪ್ರೊ. ಪುಟ್ಟಣ್ಣ ಕೆ, ವಿದ್ಯಾರ್ಥಿಗಳಿಗೆ ಸಂಶೋಧನಾ ವಿಧಾನಗಳ ಕುರಿತ ಜ್ಞಾನ ಅತ್ಯಗತ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಮಾತನಾಡಿ, ಭವಿಷ್ಯದಲ್ಲಿ ಸಂಶೋಧನೆ ಕುರಿತ ಜ್ಞಾನದ ಅಗತ್ಯತೆಯನ್ನು ಮನಗಂಡು, ಸಂಶೋಧನಾರ್ಥಿಗಳು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬೇಕು, ಎಂದರು.
ವಿಭಾಗದ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ವೆಂಕಟೇಶ್ ನಾಯಕ್ ಸಂಘದ ಚಟುವಟಿಕೆಗಳನ್ನು ವಿವರಿಸಿದರು. ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಪ್ರೊ. ಎ. ಸಿದ್ಧಿಕ್ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಖಜಾಂಜಿ ರಾಘವೇಂದ್ರ ಮೊದಲಾದವರು ಉಪಸ್ಥಿರಿದ್ದರು. ಉಪನ್ಯಾಸಕಿ ಶೀತಲ್ ಕೆ ಕಾರ್ಯಕ್ರಮ ನಿರೂಪಿಸಿದರು. ರಾಜೇಶ್ ಎ ಎಸ್ ಧನ್ಯವಾದ ಸಮರ್ಪಿಸಿದರು.
ಬೀರಿಯ ಎಐಎಂಐಟಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ನಾಗೇಂದ್ರ ಎಸ್, ಯೆನಪೋಯ (ಡೀಮ್ಡ್) ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕ ಡಾ. ನಿಯಾಝ್ ಪಣಕಜೆ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಉಪನ್ಯಾಸಕ ಡಾ. ಅಭಿನಂದನ್ ಕುಲಾಲ್ ಸಂಶೋಧನೆಯ ಕುರಿತ ವಿವಿಧ ಮಜಲುಗಳ ಕುರಿತು ಮಾತನಾಡಿದರು. ವಿವಿಧ ಕಾಲೇಜುಗಳಿಂದ ವಿದ್ಯಾರ್ಥಿಗಳು ಮತ್ತು ಸಂಶೋಧನಾರ್ಥಿಗಳು ಆಗಮಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ