ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ 'ಸಹಕಾರ ರತ್ನ' ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ 'ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ ಪುರಸ್ಕಾರ' ವನ್ನು ಶನಿವಾರ ಬೆಳಗ್ಗೆ 11 ಗಂಟೆಗೆ ಪತ್ರಿಕಾ ಭವನದಲ್ಲಿ ಪ್ರದಾನ ಮಾಡಲಾಗುವುದು.
ಹಿರಿಯ ಪತ್ರಕರ್ತ ಕೆ. ಆನಂದ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್ ಉಪಸ್ಥಿತರಿರುತ್ತಾರೆ ಎಂದು ಪ್ರೆಸ್ ಕ್ಲಬ್ ಪ್ರಕಟಣೆ ತಿಳಿಸಿದೆ.
ಡಾ. ಎಂಎನ್‌ಆರ್ ಎಂದೇ ಪ್ರಸಿದ್ಧರಾಗಿರುವ ಎಂ.ಎನ್ ರಾಜೇಂದ್ರ ಕುಮಾರ್ ಬೆಂಗಳೂರು ಕೇಂದ್ರಿತ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರು, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರು ಹಾಗೂ ಮಮಗಳೂರಿನ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟೀ ಆಗಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ