ಪುತ್ತೂರು: ಬುಡೋ ಕರಾಟೆ ಅಸೋಸಿಯೇಷನ್ ಆಫ್ ಇಂಡಿಯಾ ಇದರ ಆಶ್ರಯದಲ್ಲಿ ದಿನಾಂಕ ಭಾನುವಾರ (ಆ.20) ತಮಿಳುನಾಡಿನ ಚೆನ್ನೈಯಲ್ಲಿ ನಡೆದ ಮಹಿಳೆಯರ 16-18 ವರ್ಷ ವಿಭಾಗದ '1 ಸೌತ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2023' ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಇಶಿಕಾ ಕೆ (ಬ್ಲ್ಯಾಕ್ ಬೆಲ್ಟ್) ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಹಾಗೂ ಕಟ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಪುತ್ತೂರಿನ ಸಂಜಯನಗರ ಶಾಲೆಯ ಶಿಕ್ಷಕಿ ಶ್ರೀಮತಿ ಸ್ಮಿತಾಶ್ರೀ ಬಿ ಹಾಗೂ ಇಂಜಿನಿಯರ್ ದಿನೇಶ್ ನಾಯ್ಕ ಅವರ ಹಿರಿಯ ಪುತ್ರಿ. ಇವರಿಗೆ ಸೆನ್ಸಾಯಿ ಟಿಡಿ ಥೋಮಸ್ ರವರು ತರಬೇತಿಯನ್ನು ನೀಡಿರುತ್ತಾರೆ. ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ