ಧರ್ಮಸ್ಥಳ: ಖ್ಯಾತ ಚಲನಚಿತ್ರ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದ್ದಾರೆ.
ಸ್ಪಂದನಾ ಅವರು ನಮ್ಮ ಕ್ಷೇತ್ರದ ಭಕ್ತರೂ, ಆತ್ಮೀಯರೂ ಆಗಿದ್ದು, ಹಲವು ಬಾರಿ ಸಕುಟುಂಬಿಕರಾಗಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಪಡೆದಿದ್ದಾರೆ. ಅವರ ಸರಳ ವ್ಯಕ್ತಿತ್ವ, ಕಲಾಭಿಮಾನ ಹಾಗೂ ಕಲಾ ಪ್ರೌಢಿಮೆ ಸ್ತುತ್ಯಾರ್ಹವಾಗಿದೆ. ಅವರ ಅಕಾಲಿಕ ನಿಧನ ಅಭಿಮಾನಿಗಳಿಗೆಲ್ಲ ತೀವ್ರ ಆಘಾತವನ್ನುಂಟುಮಾಡಿದೆ.
ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೂ, ಅಭಿಮಾನಿಗಳಿಗೂ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಹೆಗ್ಗಡೆಯವರು ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ