ವಿದ್ಯಾರ್ಥಿಗಳು ಜಾಲತಾಣಗಳಿಂದ ದೂರ ಇರಬೇಕು: ಪಿಎಸ್‍ಐ ಶ್ರೀಕಾಂತ್ ರಾಥೋಡ್

Chandrashekhara Kulamarva
0

ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಜಾಗೃತಿ ಕಾರ್ಯಕ್ರಮ



ಪುತ್ತೂರು: ವಿದ್ಯಾರ್ಥಿ ಜೀವನದಲ್ಲಿ ಸಾಮಾಜಿಕ ಜಾಲತಾಣಗಳಿಂದ ದೂರು ಉಳಿಯುವುದು ಉತ್ತಮ. ಸಾಮಾಜಿಕ ಜಾಲತಾಣಗಳಿಂದ ದೂರ ಉಳಿಯುವಿಕೆ ವಿದ್ಯಾರ್ಥಿಗಳು ತಮ್ಮನ್ನು ತಾವು ವಿವಿಧ ಬಗೆಯ ದೌರ್ಜನ್ಯಗಳಿಂದ ರಕ್ಷಿಸಿಕೊಳ್ಳುವುದಕ್ಕೆ ಸಹಾಯಕ. ಅಂತೆಯೇ ಅಕಸ್ಮಾತ್ ತಮ್ಮ ಮೇಲೆ ಯಾವುದೇ ದೌರ್ಜನ್ಯ ನಡೆಯುತ್ತಿದ್ದರೆ ಅದನ್ನು ತಕ್ಷಣ ಪೋಲಿಸರಿಗೆ ತಿಳಿಸುವುದಕ್ಕೆ ಭಯಪಡಬಾರದು ಎಂದು ಪುತ್ತೂರು ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ಶ್ರೀಕಾಂತ ರಾಥೋಡ್ ಹೇಳಿದರು.


ಅವರು ನಗರದ ನಗರದ ನಟ್ಟೋಜ  ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಬುಧವಾರ ಆಯೋಜಿಸಲಾದ ಮಾಹಿತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಪೋಕ್ಸೋ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸಿದರು.


ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ವಿದ್ಯಾರ್ಥಿಗಳು ದೇಶದ ಕಾನೂನನ್ನು, ಸೈನಿಕರನ್ನು ಮತ್ತು ನಿಷ್ಠಾವಂತ ಪೊಲೀಸ್ ಅಧಿಕಾರಿಗಳನ್ನು ಗೌರವಿಸುವುದು ಎಲ್ಲರ ಕರ್ತವ್ಯ ಎಂದರು.


ಕಾರ್ಯಕ್ರಮದಲ್ಲಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ ಮತ್ತು ಪ್ರಾಂಶುಪಾಲೆ ಸುಚಿತ್ರ ಪ್ರಭು ಉಪಸ್ಥಿತರಿದ್ದರು. ಇಂಗ್ಲಿಷ್ ಉಪನ್ಯಾಸಕ ಆಶಿಕ್ ಬಾಲಚಂದ್ರ ಕಾರ್ಯಕ್ರಮ ನಿರೂಪಿಸಿ, ಜೀವಶಾಸ್ತ್ರ ಉಪನ್ಯಾಸಕಿ ಗೀತ ವಂದಿಸಿದರು. ಪ್ರಯೋಗಾಲಯ ಸಹಾಯಕ ಕೌಶಿಕ್ ಸಹಕರಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   


إرسال تعليق

0 تعليقات
إرسال تعليق (0)
To Top