ಸುರತ್ಕಲ್: ಗ್ರಂಥಾಲಯವು ಜ್ಞಾನ ಕೇಂದ್ರವಾಗಿದ್ದು ಓದುಗರು ಪುಸ್ತಕ ಪ್ರೀತಿಯನ್ನು ಬೆಳೆಸಿಕೊಳ್ಳಬೇಕಾಗಿದೆ. ಗ್ರಂಥಪಾಲಕರ ಸೇವೆಯನ್ನು ಓದುಗರು ಕೃತಜ್ಞತೆಯಿಂದ ಸ್ಮರಿಸಬೇಕು ಎಂದು ಎಸ್.ಆರ್ ಹೆಗ್ಡೆ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷೆ ಹಿರಿಯ ಸಂಶೋಧಕಿ ಇಂದಿರಾ ಹೆಗ್ಗಡೆ ನುಡಿದರು.
ಅವರು ಗೋವಿಂದ ದಾಸ ಕಾಲೇಜಿನ ಗ್ರಂಥಾಲಯ ವಿಭಾಗ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶಗಳು ಗ್ರಂಥಾಲಯ ಪಿತಾಮಹ ಡಾ. ಎಸ್.ಆರ್. ರಂಗನಾಥನ್ ಜನ್ಮ ದಿನಾಚರಣೆಯ ಅಂಗವಾಗಿ ಆಯೋಜಿಸಿದ ಗ್ರಂಥಪಾಲಕರ ದಿನಾಚರಣೆ ಮತ್ತು ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಂಥಾಲಯಗಳು ಬೆಳೆಯುವ ಸಂಸ್ಥೆಗಳಾಗಿದ್ದು ಗ್ರಂಥಗಳು ಎಲ್ಲರಿಗೂ ತಲುಪಬೇಕು ಮತ್ತು ಪುಸ್ತಕಗಳನ್ನು ಓದುವ ಅಭಿರುಚಿಯನ್ನು ಬೆಳೆಸಬೇಕೆಂದು ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಪಿ. ಕೃಷ್ಣಮೂರ್ತಿ ನುಡಿದರು.
ಗೋವಿಂದ ದಾಸ ಕಾಲೇಜಿನ ಅಲುಮ್ನಿ ಅಸೋಸಿಯೇಶನ್ ಅಧ್ಯಕ್ಷ ಎಮ್.ರಮೇಶ್ ರಾವ್, ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಹರೀಶ್.ಕೆ ಮುಖ್ಯ ಅತಿಥಿಗಳಾಗಿದ್ದರು. ಗ್ರಂಥಾಲಯದ ನಿವೃತ್ತ ಸಿಬ್ಬಂದಿ ಚಂದ್ರಶೇಖರ್.ಕೆ ಮತ್ತು ಕಾಲೇಜು ಕಛೇರಿಯ ಅಧೀಕಕ್ಷರಾದ ವೆಂಕಪ್ಪ ಮೂಲ್ಯ ಹಾಗೂ ಕಾಲೇಜಿನ ಸಿಬ್ಬಂದಿಗಳಾದ ಸುಮನ್, ನಿತೇಶ್ ಉಪಸ್ಥಿತರಿದ್ದರು.
ಗ್ರಂಥಪಾಲಕಿ ಡಾ. ಸುಜಾತ.ಬಿ ಸ್ವಾಗತಿಸಿ ಗ್ರಂಥಪಾಲಕರ ದಿನಾರಚಣೆಯ ಬಗ್ಗೆ ಮಾತನಾಡಿದರು. ಗ್ರಂಥಾಲಯದ ಸಿಬ್ಬಂದಿ ಸಾವಿತ್ರಿ ಧನ್ಯವಾದವನ್ನಿತ್ತರು.
ಈ ಸಂದರ್ಭದಲ್ಲಿ ಎಸ್.ಆರ್ ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಂದಿರಾ ಹೆಗ್ಗಡೆಯವರು ಗ್ರಂಥಗಳನ್ನು ಕೊಡುಗೆಯಾಗಿ ನೀಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ