ತಲಪಾಡಿ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥೆಯ ಸಹಯೋಗದಲ್ಲಿ ಗಡಿನಾಡ ಕನ್ನಡ ಉತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ತಲಪಾಡಿಯ ವಿಶ್ವಾಸ್ ಆಡಿಟೋರಿಯಂನಲ್ಲಿ ಭಾನುವಾರ (ಆ.26) ನಡೆಯಿತು.
ಈ ಸಮಾರಂಭವನ್ನು ಕ.ಸಾ.ಪ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ. ಎಂ.ಪಿ ಶ್ರೀನಾಥ್ ರವರ ಘನ ಅಧ್ಯಕ್ಷತೆಯಲ್ಲಿ ಕ.ಸಾ.ಪ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಸಮಾರಂಭವನ್ನು ಉದ್ಘಾಟಿಸಿದರು. ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕರು ಎ.ಕೆ.ಎಂ ಅಶ್ರಫ್, ಅರಿಬೈಲು ಗೋಪಾಲ ಶೆಟ್ಟಿ ಗೌರವಾಧ್ಯಕ್ಷರು ಗಡಿನಾಡ ಕನ್ನಡ ಉತ್ಸವ ಸಮಿತಿ, ಪ್ರದೀಪ್ ಕುಮಾರ್ ಕಲ್ಕೂರ, ಮುಂತಾದ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ನಡೆದ ವಿಚಾರ ಗೋಷ್ಠಿಯಲ್ಲಿ ಭಾಸ್ಕರ್ ರೈ ಕುಕ್ಕುವಳ್ಳಿ, ರತ್ನಾಕರ ಮಲ್ಲಮೂಲೆ, ಕಾರ್ತಿಕ್ ಪಡ್ರೆ ಹಾಗೂ ಟಿ.ಎ.ಎನ್ ಖಂಡಿಗೆ ಇವರು ವಿಚಾರಧಾರೆಗಳನ್ನು ಪ್ರಸ್ತುತಪಡಿಸಿದರು. ಸಾಹಿತಿ ಗುಣಾಜೆ ರಾಮಚಂದ್ರ ಭಟ್ ರವರ ನಿರೂಪಣೆಯಲ್ಲಿ ನಡೆದ ಬಹುಭಾಷಾ ಕವಿಗೋಷ್ಠಿಯಲ್ಲಿ ಸುಮಾರು 10 ಜನ ಕವಿಗಳು ಭಾಗವಹಿಸಿದರು.
ಈ ಕಾರ್ಯಕ್ರಮದಲ್ಲಿ ಖ್ಯಾತ ಸಾಹಿತಿ ಯಕ್ಷಗಾನ ಅರ್ಥಧಾರಿ ರಮಾನಂದ ಬನಾರಿ ಸಹಿತ ಹಲವಾರು ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಡಾ. ವಾಣಿಶ್ರೀ ಕಾಸರಗೋಡು ನೇತೃತ್ವದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ.) ಕಾಸರಗೋಡು ಸಂಸ್ಥೆಯ ಸಾಹಿತ್ಯ ಗಾನ ನೃತ್ಯ ವೈಭವ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಅಧ್ಯಕ್ಷೆ ಡಾ ವಾಣಿಶ್ರೀ ಕಾಸರಗೋಡು ಇವರ ಸಾಹಿತ್ಯ ಪ್ರಸ್ತುತಿ ಹಾಗೂ ನಿರೂಪಣೆಯಲ್ಲಿ ಗುರುರಾಜ್ ಕಾಸರಗೋಡು, ಗಾಯತ್ರಿ, ಇಂದುಮತಿ, ರಶ್ಮಿ, ಕವಿತ, ಅಹನಾ ಎಸ್ ರಾವ್,ಪ್ರಥಮ್ಯ ಯು ವೈ ನೆಲ್ಯಾಡಿ, ಶ್ರೀರಕ್ಷಾ ಸರ್ಪoಗಳ, ಇಶಾನ್, ಆಧ್ಯಾ, ಆರಾಧ್ಯ, ಕೌಶಿಕ, ಹೃತಿಕಾ, ಶ್ವೇತಾ ಯು ವೈ ನೆಲ್ಯಾಡಿ, ವರ್ಷಾ ಶೆಟ್ಟಿ ಬಂಬ್ರಾಣ, ಭಾನ್ವಿ ಕುಲಾಲ್, ಮುಂತಾದ ಕಲಾವಿದರ ಭಾಗವಹಿಸುವಿಕೆಯಲ್ಲಿ ನಯನ ಮನೋಹರವಾಗಿ ನಡೆಯಿತು.
ಸಮಾರೋಪ ಸಮಾರಂಭದಲ್ಲಿ ಕ.ಸಾ.ಪ ಉಡುಪಿ ಜಿಲ್ಲೆಯ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಪ್ರೊ. ಎ.ವಿ ನಾವುಡ, ಡಾ. ಮಾಧವ್ ಎಂ.ಕೆ ಹಾಗೂ ಹಲವಾರು ಗಣ್ಯರು ಭಾಗವಹಿಸಿದ್ದರು.
ವರದಿ ಗುರುರಾಜ್ ಕಾಸರಗೋಡು
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ