ತೆಂಕನಿಡಿಯೂರು: ವಿದ್ಯಾರ್ಥಿಗಳನ್ನು ದುಶ್ಚಟಗಳಿಂದ ದೂರವಿರಿಸಿ ಕಲಿಕೆಗೆ ಪ್ರೇರೇಪಿಸಲು ಪೋಷಕರಿಗೆ ಕರೆ

Upayuktha
0


ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ ಪ್ರಥಮ ಬಿ.ಎ., ಬಿ.ಸಿ.ಎ. ಹಾಗೂ ಬಿ.ಎಸ್ಸಿ.ಗೆ ಪ್ರಥಮ ಪದವಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳು ಮತ್ತು ಅವರ ಪಾಲಕರಿಗಾಗಿ ಅಭಿವಿನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು.  


ಸಂಪನ್ಮೂಲವ್ಯಕ್ತಿಯಾಗಿ ಆಗಮಿಸಿದ ಮನೋರೋಗ ತಜ್ಞ ಡಾ. ಪಿ.ವಿ. ಭಂಡಾರಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಇಂದಿನ ಯುವ ಜನತೆಗೆ ಬೇರೆ ಬೇರೆ ಒತ್ತಡಗಳನ್ನು ಎದುರಿಸುತ್ತಿದ್ದು ಯಾವುದೇ ರೀತಿಯಲ್ಲಿ ವಿಚಲಿತರಾಗದೇ ಅಧ್ಯಯನದ ಮೇಲೆ ಮನಸ್ಸನ್ನು ಕೇಂದ್ರೀಕರಿಸಿ ಉತ್ತಮ ಸಾಧನೆಗಳೊಂದಿಗೆ ಭವಿಷ್ಯ ರೂಪಿಸಿಕೊಳ್ಳಬೇಕು.  ದುಶ್ಚಟಗಳಿಗೆ ಬಲಿಯಾಗದೇ ತಮ್ಮ ಕರ್ತವ್ಯವನ್ನು ನಿರ್ವಹಿಸಿಕೊಂಡು ಹೆತ್ತವರಿಗೆ ಆಸರೆಯಾಗಬೇಕು.  ಸಮಾಜದಲ್ಲಿ ಸಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಉತ್ತಮ ನಾಗರಿಕರಾಗಿ ಬೆಳೆಯಬೇಕೆಂದು ಸಲಹೆಯಿತ್ತರು.  


ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಉನ್ನತ ಶಿಕ್ಷಣ ಪಡೆಯುವ ಅವಕಾಶ ಲಭಿಸಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಸೌಲಭ್ಯಗಳನ್ನು ಸಂಪೂರ್ಣ ಸದುಪಯೋಗಪಡಿಸಿ ಕೊಳ್ಳಬೇಕಾಗಿ ಸೂಚಿಸಿದರು.  ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರಶಾಂತ ನೀಲಾವರ ಪದವಿ ಶಿಕ್ಷಣದಲ್ಲಿ ಪರೀಕ್ಷಾ ವ್ಯವಸ್ಥೆ, ವಿವಿಧ ಕೋರ್ಸುಗಳು, ಹಾಜರಾತಿ ಹಾಗೂ ಕಾಲೇಜಿನಲ್ಲಿರುವ ಅವಕಾಶಗಳು, ಸಹಪಠ್ಯ ಚಟುವಟಿಕೆಗಳ ಕುರಿತಾಗಿ ಮಾಹಿತಿ ನೀಡಿದರು.  


ಕಾರ್ಯಕ್ರಮದಲ್ಲಿ ಉಡುಪಿ ಲಯನ್ಸ್ ಅಮೃತ್‍ನ ಅಧ್ಯಕ್ಷರಾದ ಲಯನೆಸ್ ಭಾರತಿ ಹೆಚ್.ಎಸ್., ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥರಾದ ರಾಜ್ ಕುಮಾರ್, ಗಣಿತಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ಮಮತಾ ಎ.ಎಲ್., ಅಂಗ್ಲ ವಿಭಾಗ ಮುಖ್ಯಸ್ಥರಾದ ನಿತ್ಯಾನಂದ ವಿ. ಗಾಂವಕರ್ ಹಾಗೂ ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.  ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಡಾ. ಪ್ರಸಾದ್ ರಾವ್ ಎಂ. ಸ್ವಾಗತಿಸಿದರು.  ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರಾಧಾಕೃಷ್ಣ ಕಾರ್ಯಕ್ರಮ ನಿರೂಪಿಸಿದರು. ಗಣಕ ವಿಜ್ಞಾನ ಸಹಾಯಕ ಪ್ರಾಧ್ಯಾಪಕರಾದ ಪ್ರಸಾದ್ ಎಂ.ಹೆಚ್. ವಂದಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top