ತೆಂಕನಿಡಿಯೂರು ಕಾಲೇಜು : ಪ್ರಥಮ ಪದವಿ ವಿದ್ಯಾರ್ಥಿಗಳ ಮಾಹಿತಿ ಕಾರ್ಯಾಗಾರ
ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ ಪ್ರಥಮ ಬಿ.ಕಾಂ., ಬಿ.ಬಿ.ಎ. ಮತ್ತು ಬಿ.ಎಸ್.ಡಬ್ಲ್ಯೂ. ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣದ ಕುರಿತಾಗಿ ಹಮ್ಮಿಕೊಳ್ಳಲಾದ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಲಯನ್ಸ್ ಕ್ಲಬ್ ಅಮೃತ್ ಇದರ ಮಾಜಿ ಜಿಲ್ಲಾ ಗವರ್ನರ್ ಲಯನ್ ಎನ್.ಎಂ. ಹೆಗಡೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ರಾಷ್ಟ್ರ ನಿರ್ಮಾಣ ಮಾಡಿದ ಮಹಾ ನಾಯಕರಿಂದ ಸ್ಪೂರ್ತಿ ಪಡೆದು ವಿದ್ಯೆಯ ಜೊತೆಗೆ ಸೇವಾ ಮನೋಭಾವನೆಯನ್ನು ಮೈಗೂಡಿಸಿಕೊಳ್ಳುವಂತೆ ಕರೆನೀಡಿದರು. ನಮ್ಮ ಅಧ್ಯಯನ ಕೇವಲ ಪಠ್ಯಕ್ರಮ-ಪರೀಕ್ಷೆಗಳಿಗಷ್ಟೇ ಸೀಮಿತವಾಗಿರದೇ ಜ್ಞಾನ ಸಂಪಾದನೆಯತ್ತ ಕೇಂದ್ರಿತವಾಗಿರಬೇಕೆಂದರು.
ಬಿ.ಬಿ.ಎ. ಮುಖ್ಯಸ್ಥರಾದ ಡಾ. ರಘು ನಾಯ್ಕ ಪದವಿ ಶಿಕ್ಷಣದ ಪರೀಕ್ಷಾ ವ್ಯವಸ್ಥೆ, ಅಧ್ಯಯನ ವಿಷಯಗಳು, ಹಾಜರಾತಿ, ಸಹಪಠ್ಯ ಚಟುವಟಿಕೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಕಾಲೇಜಿನಲ್ಲಿ ಸಿಗುವ ಸಕಲ ಸೌಲಭ್ಯಗಳನ್ನು ಸಂಪೂರ್ಣವಾಗಿ ಬಳಸಿಕೊಂಡು ಉನ್ನತ ಶಿಕ್ಷಣದ ಮತ್ತು ವೃತ್ತಿ ಭವಿಷ್ಯದ ಕನಸಗಳನ್ನು ಸಾಕಾರಗೊಳಿಸಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆಯಿತ್ತರು. ಲಯನ್ಸ್ ಅಮೃತ್ ಉಡುಪಿ ಅಧ್ಯಕ್ಷರಾದ ಲಯನೆಸ್ ಭಾರತಿ ಹೆಚ್. ಕಾರ್ಯಕ್ರಮದಲ್ಲಿ ಭಾಗಿಯಾಗಿ ಶುಭ ಹಾರೈಸಿದರು. ಕಾಲೇಜಿನ ಶೈಕ್ಷಣಿಕ ಸಂಚಾಕರಾದ ಡಾ. ಪ್ರಸಾದ್ ರಾವ್ ಎಂ. ಸ್ವಾಗತಿಸಿದರು, ಸಂಖ್ಯಾಶಾಸ್ತ್ರ ಸಹಪ್ರಾಧ್ಯಾಪಕ ಶ್ರೀ ಉಮೇಶ್ ಪೈ ವಂದಿಸಿದರು. ಕಾಲೇಜನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ರಾಧಾಕೃಷ್ಣ, ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಶ್ರೀಮತಿ ಬಿಂದು ಟಿ. ಕಾರ್ಯಕ್ರಮ ಆಯೋಜಿಸಿದರೆ, ಗ್ರಂಥಪಾಲಕರಾದ ಶ್ರೀ ಕೃಷ್ಣ, ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಶ್ರೀ ಪ್ರಶಾಂತ ನೀಲಾವರ, ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಶ್ರೀ ದಿನೇಶ್ ಎಂ. ಇನ್ನಿತರರು ಸಹಕರಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆಗೆ ಅವರ ಪಾಲಕರೂ ಭಾಗವಹಿಸಿ ಉಪಯುಕ್ತ ಮಾಹಿತಿ ಪಡೆದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ