ಉಡುಪಿ: ಉಡುಪಿ ಅಜ್ಜರಕಾಡಿನ ವಿದ್ಯಾ ವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಗ್ರಂಥಾಲಯ ಮತ್ತು ಡಿಜಿಟಲ್ ಗ್ರಂಥಾಲಯ ಹಾಗೂ ಗ್ರಂಥಗಳ ಮಹತ್ವದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಇಂದು ನಡೆಯಿತು.
ಕಾರ್ಯಕ್ರಮವನ್ನು ವಸಂತಿ ಶೆಟ್ಟಿ ಬ್ರಹ್ಮಾವರ ಹಿರಿಯ ಸಾಹಿತಿ ಹಾಗೂ ಉಪಾಧ್ಯಕ್ಷರು ಜಿಲ್ಲಾ ಗ್ರಂಥಾಲಯ ಪ್ರಾಧಿಕಾರ ಇವರು ಉದ್ಘಾಟಿಸಿ , ಗ್ರಂಥಾಲಯ ಮತ್ತು ಗ್ರಂಥಗಳ ಮಹತ್ವದ ಬಗ್ಗೆ ಉಪನ್ಯಾಸವನ್ನು ನೀಡಿದರು.
ಜ್ಞಾನದೇಗುಲವಾದ ಗ್ರಂಥಾಲಯದ ಸದ್ಬಳಕೆ ಮಾಡಿಕೊಂಡರೆ ಜೀವನದ ಅಂಧಕಾರವು ದೂರವಾಗಿ ಜ್ಞಾನವೆಂಬ ಬೆಳಕು ನಮ್ಮ ಜೀವನದಲ್ಲಿ ನೆಲೆಗೊಳ್ಳುತ್ತದೆ. ಆದುದರಿಂದ ಆದಷ್ಟು ಗ್ರಂಥಾಲಯಗಳ ಸದುಪಯೋಗಪಡಿಸಿಕೊಳ್ಳಬೆಕು. ವಿದ್ಯಾರ್ಥಿ ಜೀವನವು ಬದುಕಿನ ಪ್ರಮುಖವಾದ ಘಟ್ಟ. ಈ ಜೀವನದಲ್ಲಿ ಮೊಬೈಲ್ ಹಾಗೂ ದುಶ್ಚಟಗಳಿಂದ ದೂರವಿದ್ದು ಜೀವನದ ಮೌಲ್ಯಗಳನ್ನು ಅರಿತು ಇನ್ನಷ್ಟು ಹೆಚ್ಚಿಸಿಕೊಳ್ಳುವಂತೆ ಹಾಗೂ ಜೀವನದಲ್ಲಿ ಎಂತಹ ಪರಿಸ್ಥಿತಿ ಬಂದರೂ ಮಾನಸಿಕ ಖಿನ್ನತೆಗೆ ಒಳಗಾಗದೇ ಆತ್ಮಸ್ಥೆರ್ಯ ಹಾಗೂ ಆತ್ಮವಿಶ್ವಾಸದಿಂದ ಎದುರಿಸುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಪೂರ್ಣ ಪ್ರಜ್ಞಾ ಇನ್‌ಸ್ಟಿಟ್ಯೂಟ್ ಅಫ್ ಮ್ಯಾನೇಜ್‌ಮೆಂಟ್ ಇಲ್ಲಿನ ಗ್ರಂಥಾಲಯ ಕಮಿಟಿ ಸಂಯೋಜಕಿ ಸುಜಾತ ಜಿ.ಎಲ್. ಗ್ರಂಥಾಲಯವನ್ನು ವೀಕ್ಷಿಸಿ, ವಿದ್ಯಾರ್ಥಿಗಳು ಕಾಲೇಜು ಮುಗಿದ ನಂತರ ಯು.ಪಿ.ಎಸ್.ಸಿ ಮತ್ತು ಕೆ.ಎ.ಎಸ್ ಹಾಗೂ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡಾಗ ಇಂತಹ ಗ್ರಂಥಾಲಯದ ಉಪಯುಕ್ತತೆಯನ್ನು ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಗ್ರಂಥಾಲಯಗಳಿಂದ ಮಾತ್ರ ಸಾಧ್ಯ.. ಅತೀ ಹೆಚ್ಚು ಗ್ರಂಥಗಳನ್ನು ಓದುವುದರಿಂದ ನಿಮ್ಮ ಉತ್ತಮ ಭವಿಷ್ಯವನ್ನು ರೂಪಿಸಬಹುದು ಎಂದು ಹೇಳಿದರು.
ಪೂರ್ಣ ಪ್ರಜ್ಞಾ ಇನ್‌ಸ್ಟಿಟ್ಯೂಟ್ ಅಫ್ ಮ್ಯಾನೇಜ್‌ಮೆಂಟ್ ಗ್ರಂಥಾಲಯದ ಗ್ರಂಥಪಾಲಕ ಪುರೋಷತ್ತಮ ಗೌಡ ಉಪಸ್ಥಿತರಿದ್ದರು. ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಗ್ರಂಥಾಲಯ ಸಹಾಯಕರಾದ ಸುನೀತ ಇವರು ಪ್ರಾರ್ಥಿಸಿದರು. ಗ್ರಂಥಪಾಲಕಿ ರಂಜಿತ ಸಿ ನಿರೂಪಿಸಿದರು. ಪ್ರಥಮ ದರ್ಜೆ ಸಹಾಯಕಿ ಶಕುಂತಳಾ ಕುಂದರ್ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ