ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ : ಅರ್ಜಿ ಆಹ್ವಾನ

Upayuktha
0

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

 

ಆಯ್ಕೆಯಾದ ಪ್ರತಿ ಮಗುವಿಗೆ ತಲಾ 10000 ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. 


ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿರಬೇಕು, ಸಾಧನೆ ಅಸಾಧಾರಣವೆಂದು ಸಮರ್ಥಿಸಲು ಪೂರಕ ದಾಖಲೆಗಳನ್ನು ಅಕ್ಟೋಬರ್ 1 ರ ಒಳಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ಕಚೇರಿಗೆ ಸಲ್ಲಿಸಬೇಕು.

   

ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ, ದೂರವಾಣಿ ಸಂಖ್ಯೆ 0820-2574978 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. 


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top