ಕರ್ನಾಟಕ ಕರಾವಳಿಯ ರಾಷ್ಟ್ರೀಯ ಭದ್ರತೆಯ ಬಗ್ಗೆ ವಿಚಾರ ವಿನಿಮಯ

Chandrashekhara Kulamarva
0

 


ಉಡುಪಿ: ಕರಾವಳಿ ಕಾವಲು ಪೊಲೀಸ್ ಕರ್ನಾಟಕ, ಕೇಂದ್ರ ಕಛೇರಿ ಮಲ್ಪೆಯಲ್ಲಿ ,ಇಂದು ಅಬ್ದುಲ್ ಅಹದ್, ಐಪಿಎಸ್‍ರವರ ಉಪಸ್ಥಿತಿಯಲ್ಲಿ ಮರ್ಚೆಂಟ್ ನೇವಿಯ ನಿವೃತ್ತ ಅಧಿಕಾರಿಗಳು ಮತ್ತು ಭಾರತೀಯ ನೌಕಾಸೇನೆ, ಭಾರತೀಯ ತಟ ರಕ್ಷಣ ಪಡೆಯಲ್ಲಿ ಪ್ರಸ್ತುತ ಕೆಲಸ ಮಾಡುತ್ತಿರುವ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಕರ್ನಾಟಕ ಕರಾವಳಿಯ ರಾಷ್ಟ್ರೀಯ ಭದ್ರತೆಯ ಬಗ್ಗೆ ವಿಚಾರ ವಿನಿಮಯ ನಡೆಸಲಾಯಿತು.


ಡಾಲ್ಸಿ ಪಿಂಟೋ ಉಪಪ್ರಾಂಶುಪಾಲರು, ಮಂಗಳೂರು ಮರೈನ್ ಕಾಲೇಜು ಹಾಗೂ ಇತರೇ ನಿವೃತ್ತ ಹಾಗೂ ಪ್ರಸ್ತುತ ಸೇವೆಯಲ್ಲಿರುವ ನೌಕಾಧಿಕಾರಿಗಳು ತಮ್ಮ ಕರ್ತವ್ಯದ ಸಮಯದಲ್ಲಿ ಅವರ ಬೇರೆ ಬೇರೆ ದೇಶಗಳ ಪ್ರಯಾಣದ ವೇಳೆ ಆದ ಅವರ ಅನುಭವಗಳನ್ನು ಹಾಗೂ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನಿಸಿಕೆಯನ್ನು ಹಂಚಿಕೊಂಡರು.


ಸಭೆಯಲ್ಲಿ ಕರಾವಳಿ ಕಾವಲು ಪೊಲೀಸ್ ಘಟಕದ 9 ಠಾಣೆಗಳ ಪೊಲೀಸ್ ನಿರೀಕ್ಷಕರು ಹಾಗೂ ಉಪ ನಿರೀಕ್ಷಕರುಗಳು ಭಾಗವಹಿಸಿದ್ದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

إرسال تعليق

0 تعليقات
إرسال تعليق (0)
To Top