ಉಡುಪಿ: ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮ

Upayuktha
0

ಉಡುಪಿ: ಉಡುಪಿ ನಗರಸಭಾ ವತಿಯಿಂದ ಅಜ್ಜರಕಾಡು ವಾರ್ಡಿನಲ್ಲಿರುವ ಹುತಾತ್ಮಾರ ಸ್ಮಾರಕದಲ್ಲಿ ಗುರುವಾರ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮದ ಅಂಗವಾಗಿ ಮಾತೃಭೂಮಿಯ ಸ್ವಾತಂತ್ರ್ಯ ಮತ್ತು ಗೌರವ ರಕ್ಷಣೆಗಾಗಿ ಪ್ರಾಣಾರ್ಪಣೆ ಮಾಡಿದ ಹೆಮ್ಮಯ ವೀರರಿಗೆ ನಮನಗಳನ್ನು ಸಲ್ಲಿಸಿ ಗೌರವ ಸಮರ್ಪಣೆ ಮಾಡಲಾಯಿತು.


ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣ ಹಾಗೂ ಶಿಲಾಫಲಕವನ್ನು ಉದ್ಘಾಟಿಸಿದರು.


ಕಾರ್ಯಕ್ರಮದಲ್ಲಿ ಮಣ್ಣನ್ನು ಹಿಡಿದು ಪ್ರತಿಜ್ಞಾ ವಿಧಿ ಬೋಧಿಸಿ, ಸದರಿ ಮಣ್ಣನ್ನು ಅಮೃತ ಕಳಶಕ್ಕೆ ಹಾಕಿ, ಕ್ರೀಡಾ ಇಲಾಖೆಗೆ ಹಸ್ತಾಂತರಿಸಲಾಯಿತು. ನಿವೃತ್ತ ಯೋಧರ ಸನ್ಮಾನ ಹಾಗೂ ಗಿಡ ನೆಡುವ ಕಾರ್ಯಕ್ರಮ ನಡೆಯಿತು. 


ಕಾರ್ಯಕ್ರಮಲ್ಲಿ ಶಾಸಕ ಯಶ್‍ಪಾಲ್ ಸುವರ್ಣ, ನಗರಸಭಾ ಪೌರಾಯುಕ್ತ ರಾಯಪ್ಪ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ನಿವೃತ್ತ ಯೋಧರು, ನಗರಸಭಾ ಸದಸ್ಯರು, ಹಾಗೂ ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. 

 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter    

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top