ಉಡುಪಿ: ಆ.19ರಂದು ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಫೋಟೋಗ್ರಫಿ ಕಾರ್ಯಾಗಾರ

Upayuktha
0

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವ ಸಮಿತಿ, ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ಇದರ ಪ್ರಾಯೋಜಕತ್ವದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಫೋಟೋಗ್ರಫಿ ಕಾರ್ಯಾಗಾರವನ್ನು ಆ.19ರಂದು ಬೆಳಗ್ಗೆ 10ಗಂಟೆಗೆ ಉಡುಪಿ ನಾಯರ್‌ಕೆರೆಯ ಐಎಂಎ ಭವನದಲ್ಲಿ ಆಯೋಜಿಸಲಾಗಿದೆ.


ಉಡುಪಿಯಲ್ಲಿಂದು ಕರೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಾಗಾರವನ್ನು ಮಲ್ಪೆ ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಅಬ್ದುಲ್ ಅಹದ್ ಉದ್ಘಾಟಿಸಲಿರುವರು. ಛಾಯಾಚಿತ್ರ ಪ್ರದರ್ಶನವನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ಅಧ್ಯಕ್ಷ ಜನಾರ್ದನ ಕೊಡವೂರು, ಹಳೆ ಕ್ಯಾಮೆರಾಗಳ ಪ್ರದರ್ಶನವನ್ನು ಉದ್ಯಮಿ ಶ್ರೀಶ ನಾಯಕ್ ಪೆರ್ಣಂಕಿಲ ಉದ್ಘಾಟಿಸಲಿರುವರು ಎಂದರು.


ಫೋಟೋಗ್ರಫಿ ಕಾರ್ಯಾಗಾರವನ್ನು ಉದಯವಾಣಿಯ ಛಾಯಾಚಿತ್ರ ಪತ್ರಕರ್ತ ಅಸ್ಟ್ರೋ ಮೋಹನ್, ನುಡಿಚಿತ್ರ ಕಾರ್ಯಾಗಾರವನ್ನು ಮಂಗಳೂರು ವಿಜಯ ಕರ್ನಾಟಕ ಹಿರಿಯ ಉಪಸಂಪಾದಕ ಸುಶೀಲೇಂದ್ರ ಕುಟುಪಾಡಿ ನಡೆಸಿಕೊಡಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿರುವರು.


ಈ ಕಾರ್ಯಾಗಾರದಲ್ಲಿ ಉಡುಪಿ ಅಜ್ಜರಕಾಡು ಮಹಿಳಾ ಪ್ರಥಮ ದರ್ಜೆ ಕಾಲೇಜು, ಉಡುಪಿ ಎಂಜಿಎಂ ಕಾಲೇಜು, ಕಾರ್ಕಳ ಎಂಪಿಎಂ ಕಾಲೇಜು ಮತ್ತು ಕುಂದಾಪುರ ಭಂಡಾರ್‌ಕಾರ್ಸ್‌ ಕಾಲೇಜಿನ ಪತ್ರಿಕೋದ್ಯಮ ವಿಭಾಗದ 50ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಲಿರುವರು. 


ಛಾಯಾಚಿತ್ರ ಪ್ರದರ್ಶನದಲ್ಲಿ ನಮ್ಮ ಸಂಘದ ಸದಸ್ಯರು ತೆಗೆದ 20ಕ್ಕೂ ಅಧಿಕ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಅಲ್ಲದೆ ಸಂಘದ ಸದಸ್ಯರ ಸಂಗ್ರಹದಲ್ಲಿರುವ ಹಳೆಯ ವಿಡಿಯೋ ಹಾಗೂ ಫೋಟೋ ಕ್ಯಾಮೆರಾಗಳನ್ನು ಪ್ರದರ್ಶಿಸಲಾಗುತ್ತದೆ ಎಂದು ಅವರು ಮಾಹಿತಿ‌ ನೀಡಿದರು.


ಪತ್ರಿಕಾಗೋಷ್ಠಿಯಲ್ಲಿ ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್, ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ, ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top