ಉಡುಪಿ: ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಆಗಸ್ಟ್ 7ರಂದು ಸೋಮವಾರ ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ಉದ್ಯೋಗ ಮೇಳ 2023 ನಡೆಯಲಿದೆ.
ಅಮೆಜಾನ್, ಆಕ್ಸಿಸ್ ಬ್ಯಾಂಕ್, ವಿನ್‌ಮನ್, ಮಣಿಪಾಲ್ ಗ್ರೂಪ್, ಮುತ್ತೂಟ್ ಫೈನಾನ್ಸ್, ಮಾಂಡೋವಿ ಮೋಟರ್ಸ್, ಭಾರತ್ ಆಟೋಕಾರ್ಸ್, ಯುರೇಕಾ ಫೋರ್ಬ್ಸ್, ದಿಯಾ ಟೆಕ್ನಾಲಜಿ ಸೇರಿದಂತೆ 15ಕ್ಕೂ ಹೆಚ್ಚು ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, 1000ಕ್ಕೂ ಅಧಿಕ ಉದ್ಯೋಗಾವಕಾಶಗಳನ್ನು ನೀಡಲಿವೆ.
ಬಿಎಸ್‌ಸಿ, ಬಿಸಿಎ, ಬಿ.ಕಾಂ, ಬಿಬಿಎ, ಬಿಎ, ಎಂಸಿಎ, ಬಿ.ಇ (ಎಲ್ಲ ಶಾಖೆಗಳು), ಎಂ.ಎಸ್‌ಸಿ, ಎಂ.ಎ, ಎಂ.ಕಾಂ, ಎಂಬಿಎ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿ, ತಮಗೆ ಸೂಕ್ತವಾದ ಉದ್ಯೋಗಗಳನ್ನು ಪಡೆಯಬಹುದಾಗಿದೆ.
ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್‌ಪೋರ್ಟ್ ಸೈಜ್ ಫೋಟೋ, ಆಧಾರ್ ಕಾರ್ಡ್ ಹಾಗೂ ಸ್ವವಿವರದ ಅರ್ಜಿಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.
ಉದ್ಯೋಗ ಮೇಳಕ್ಕೆ ಅಭ್ಯರ್ಥಿಗಳ ನೋಂದಣಿ ಕಡ್ಡಾಯವಾಗಿರುತ್ತದೆ. ಅಭ್ಯರ್ಥಿಗಳು ಕನಿಷ್ಠ 5 ರೆಸ್ಯುಮ್‌ಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗಬೇಕಾಗುತ್ತದೆ. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ- 99642 82714, 9845949648, 9535662115, 9980530553 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ