ಉಡುಪಿ: ಕ್ರೀಡಾಪಟುಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿ

Upayuktha
0

ಉಡುಪಿ:  ಕಳೆದ ಐದು ವರ್ಷಗಳಲ್ಲಿ ಭಾರತ ಸಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಪದಕ ಪಡೆದ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ  ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

       

ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಪ್ರಥಮ ಪಿ.ಯು.ಸಿಯಿಂದ ಸ್ನಾತಕೋತ್ತರ ಪದವಿ (ವೃತ್ತಿಪರ ಕೋರ್ಸ್‍ಗಳನ್ನೊಳಗೊಂಡಂತೆ) ವ್ಯಾಸಂಗ ಮಾಡುತ್ತಿರುವ ಕೇಂದ್ರ, ರಾಜ್ಯ ಸರ್ಕಾರಿ, ಅನುದಾನಿತ ಮತ್ತು ಖಾಸಗಿ  ಶಾಲಾ ಕಾಲೇಜುಗಳ ಕ್ರೀಡಾ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. 

   

ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುವಿನ ಕುಟುಂಬದ ಒಟ್ಟು ವಾರ್ಷಿಕ ಆದಾಯ ರೂ.2.50ಲಕ್ಷಗಳು ಇರುವಂತಹ ಕ್ರೀಡಾಪಟುಗಳು ಮಾತ್ರ ಈ ಪ್ರಯೋಜನವನ್ನು ಪಡೆಯಲು ಅವಕಾಶವಿರುತ್ತದೆ. ವಿಕಲಚೇತನ ಕ್ರೀಡಾಪಟುಗಳು ಕೂಡಾ ಈ ಯೋಜನೆಗೆ ಅರ್ಹರಾಗಿರುತ್ತಾರೆ. 


ಅರ್ಹ ಅಭ್ಯರ್ಥಿಗಳು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,  ಮಹಾತ್ಮಗಾಂಧಿ  ಜಿಲ್ಲಾ  ಕ್ರೀಡಾಂಗಣ  ಅಜ್ಜರಕಾಡು, ಉಡುಪಿ (ದೂರವಾಣಿ ಸಂಖ್ಯೆ: 0820-2521324) ಇವರಿಂದ ಅರ್ಜಿ ನಮೂನೆ ಪಡೆದು ಭರ್ತಿಮಾಡಿ ದೃಢೀಕೃತ ದಾಖಲೆಗಳೊಂದಿಗೆ ಆಗಸ್ಟ್ 25  ರೊಳಗಾಗಿ ಹಿಂತಿರುಗಿಸಲು ಕೋರಿದೆ. ನಂತರ ಬರುವ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter    

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top